ಬಾಲಕಿ ಮೇಲೆ ಅತ್ಯಾಚಾರ : ಬಂಧನ

| Published : Jul 27 2024, 12:50 AM IST

ಸಾರಾಂಶ

ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿ ಮಾವಿನಹಳ್ಳಿಯಲ್ಲಿ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಗುಬ್ಬಿ: ತಾಲೂಕಿನ ಸಿ.ಎಸ್. ಪುರ ಹೋಬಳಿ ಮಾವಿನಹಳ್ಳಿಯಲ್ಲಿ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಬಾಲಕಿಯ ಸಂಬಂಧಿಯಾಗಿರುವ ಗ್ರಾಮದ 21 ವರ್ಷದ ಸ್ವಾಮಿ ಎಂಬ ಯುವಕ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು ಇದೀಗ ಬಾಲಕಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಭಯದಿಂದಾಗಿ ಬಾಲಕಿ ಇದುವರೆಗೂ ಪೋಷಕರಿಗೆ ಹಾಗೂ ಶಿಕ್ಷಕರಿಗೂ ವಿಷಯ ತಿಳಿಸಿರಲಿಲ್ಲ ಎನ್ನಲಾಗಿದೆ. ಇತ್ತೀಚೆಗೆ ಬಾಲಕಿ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಸಮಯದಲ್ಲಿ ವೈದ್ಯರು ಬಾಲಕಿ ಗರ್ಭಿಣಿಯಾಗಿರುವ ವಿಷಯವನ್ನು ಖಚಿತಪಡಿಸಿದ್ದಾರೆ. ಈ ಸಂಬಂಧ ಸಿಎಸ್ ಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.