ಕನ್ನಡಪ್ರಭ ವಾರ್ತೆ ಅಥಣಿಸರ್ಕಾರಿ ಶಾಲೆಯ ಆವರಣದಲ್ಲೇ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡಪ್ರಭ ವಾರ್ತೆ ಅಥಣಿ

ಸರ್ಕಾರಿ ಶಾಲೆಯ ಆವರಣದಲ್ಲೇ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆ ಆವರಣದಲ್ಲಿ ನ.25ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಾಲಾ ಅವಧಿ ಮುಗಿದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮನೆಗೆ ತೆರಳಿದ ಬಳಿಕ, ವಿವಾಹಿತ ವ್ಯಕ್ತಿಯೊಬ್ಬ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ನಿಂಗಪ್ಪ ರಾಮಚಂದ್ರ ಕೊಳೇಕರ (38) ಅತ್ಯಾಚಾರ ಎಸಗಿದ ಆರೋಪಿ. ಯುವತಿಯ ತಂದೆ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು, ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯ ಗಂಭೀರತೆ ಪರಿಗಣಿಸಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಥಣಿ ಪೊಲೀಸ್ ಠಾಣೆಗೆ ತೆರಳಿ ಪ್ರಕರಣದ ಕುರಿತು ಮಾಹಿತಿ ಪಡೆದು ತನಿಖೆಯ ಪ್ರಗತಿಯನ್ನು ಪರಿಶೀಲಿಸಿದ್ದಾರೆ.