ಸಾರಾಂಶ
Rape of minor: Demand for punishment for the accused
ಕಲಬುರಗಿ: ನಗರದ ಇಎಸ್‍ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆಯನ್ನು ನೋಡಿಕೊಳ್ಳಲು ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ, ಪರಿಚಿತ ಯುವಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಅಮಾನುಷ ಘಟನೆಗೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿಯು, ಈ ಕೃತ್ಯವನ್ನು ಧಿಕ್ಕರಿಸಿ, ಆರೋಪಿಗೆ ಫೋಕ್ಸೊ ಕಾಯ್ದೆಯಡಿ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ಅತ್ಯಾಚಾರಿಗಳಿಗೆ ಕಾನೂನು ಅಥವಾ ಶಿಕ್ಷೆಯ ಭಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕೇವಲ ಬಂಧನ ಸಾಕಾಗದು ಕಠಿಣ ಶಿಕ್ಷೆಯೇ ತಡೆಗೆ ಮಾರ್ಗ ಎಂದು ಸಂಘಟನೆಯ ಅಧ್ಯಕ್ಷೆ ಚಂದಮ್ಮ ಗೋಳಾ ಹಾಗೂ ಪ್ರಧಾನ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಅವರು ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಬಾಲಕಿಗೆ ಸಂಪೂರ್ಣ ನ್ಯಾಯ ಸಿಗುವಂತೆ ಕಾನೂನು ವ್ಯವಸ್ಥೆ ಕೈ ಜೋಡಿಸಬೇಕೆಂದು ಆಗ್ರಹಿಸಿದ್ದಾರೆ.
----