ಕೋಲಾರ:ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ಮಾಡಿದ ಮುಳಬಾಗಿಲು ತಾಲೂಕು, ಕೃಷ್ಣಗಿರಿ ಬಾಲಕೃಷ್ಣ ಅಲಿಯಾಸ್ ಬಾಲು (26) ಆರೋಪಿಗೆ ಕೋಲಾರ ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿದೆ. ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿ ಅತ್ಯಾಚಾರ ಮಾಡಿದ ಸಂಬಂಧ ಕೋಲಾರ ಮಹಿಳಾ ಪೋಲೀಸ್ ಠಾಣೆಯಲ್ಲಿ ಮೇ 29 2024 ರಂದು ನೀಡಿದ ದೂರಿನ ಮೇರೆಗೆ ಕಲಂ 6 ಪೋಕ್ಸೊ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಠಾಣೆಯ ಆರಕ್ಷಕ ನಿರೀಕ್ಷಕ ಬಿ.ಶಂಕರಾಚಾರಿ ಆರೋಪಿಯ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ನೊಂದ ಬಾಲಕಿಗೆ ಸರ್ಕಾರದಿಂದ 4 ಲಕ್ಷ ಪರಿಹಾರ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.