ಸಾರಾಂಶ
ಶಿಕ್ಷೆಗೆ ಗುರಿಯಾದ ಆರೋಪಿ ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಪತ್ರೋಟಿ. ಈತ ತನ್ನ ಗೆಳೆಯನ ತಂಗಿ, ಕಾಪು ತಾಲೂಕಿನಲ್ಲಿ ವಾಸವಾಗಿದ್ದ 14 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. ಆಕೆ ತನ್ನ ಗದಗ ಜಿಲ್ಲೆಯ ರೋಣ ತಾಲೂಕಿನ ಅಜ್ಜಿ ಮನೆಗೆ ತೆರಳಿದ್ದಾಗ, ಅಲ್ಲಿ ಮಂಜುನಾಥ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದ್ದಲ್ಲಿ, ತಾನು ವೀಡಿಯೋ ಮಾಡಿದ್ದು, ಅಣ್ಣ ಹಾಗೂ ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.
ಕನ್ನಡಪ್ರಭ ವಾರ್ತೆ ಉಡುಪಿ
ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಉಡುಪಿಯ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.ಶಿಕ್ಷೆಗೆ ಗುರಿಯಾದ ಆರೋಪಿ ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಪತ್ರೋಟಿ. ಈತ ತನ್ನ ಗೆಳೆಯನ ತಂಗಿ, ಕಾಪು ತಾಲೂಕಿನಲ್ಲಿ ವಾಸವಾಗಿದ್ದ 14 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದ. ಆಕೆ ತನ್ನ ಗದಗ ಜಿಲ್ಲೆಯ ರೋಣ ತಾಲೂಕಿನ ಅಜ್ಜಿ ಮನೆಗೆ ತೆರಳಿದ್ದಾಗ, ಅಲ್ಲಿ ಮಂಜುನಾಥ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದ್ದಲ್ಲಿ, ತಾನು ವೀಡಿಯೋ ಮಾಡಿದ್ದು, ಅಣ್ಣ ಹಾಗೂ ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದ.ನಂತರ ವಿಷಯ ತಿಳಿದ ಬಾಲಕಿಯ ತಾಯಿ, ಉಡುಪಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಅಂದಿನ ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲಗುಜ್ಜಿ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.ಒಟ್ಟು 39 ಸಾಕ್ಷಿಗಳ ಪೈಕಿ ಸಂತ್ರಸ್ತ ಬಾಲಕಿ ಸಹಿತ 16 ಸಾಂದರ್ಭಿಕ ಸಾಕ್ಷಿಗಳ ವಿಚಾರಣೆ ನಡೆಸಿ ಆರೋಪಿಯನ್ನು ತಪ್ಪಿತಸ್ಥ ಎಂದು ಉಡುಪಿಯ ಪೋಕ್ಸೋ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ ಅವರು ತೀರ್ಮಾನಿಸಿ, ಆರೋಪಿಗೆ 20 ವರ್ಷಗಳ ಕಠಿಣ ಕಾರಗೃಹ ಶಿಕ್ಷೆ ಹಾಗೂ 25 ಸಾವಿರ ರು. ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಸರ್ಕಾರದಿಂದ 1.50 ಲಕ್ಷ ರು. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಜಯರಾಂ ಶೆಟ್ಟಿ ಹಾಗೂ ಪೋಕ್ಸೊ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.