ಸಾರಾಂಶ
ಅಪ್ರಾಪ್ತೆಯನ್ನು ಅಪಹರಿಸಿ, ಮದುವೆಯಾಗಿ ಅತ್ಯಾಚಾರ ಮಾಡಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹40 ಸಾವಿರ ದಂಡ ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ದಾವಣಗೆರೆ: ಅಪ್ರಾಪ್ತೆಯನ್ನು ಅಪಹರಿಸಿ, ಮದುವೆಯಾಗಿ ಅತ್ಯಾಚಾರ ಮಾಡಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹40 ಸಾವಿರ ದಂಡ ಹಾಗೂ ಕೃತ್ಯಕ್ಕೆ ಸಹಕರಿಸಿದ ಆರೋಪಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ಚನ್ನಗಿರಿ ಪಟ್ಟಣ ನಿವಾಸಿಗಳಾದ ಸಿ.ಎಚ್. ಮನೋಹರ (25) ಅತ್ಯಾಚಾರ ಅಪರಾಧಿ. ಕೃತ್ಯಕ್ಕೆ ಸಹಕರಿಸಿದವನು ಹನುಮಂತ (31) ಎಂಬವನಾಗಿದ್ದು, ಇವನಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.ಚನ್ನಗಿರಿಯಲ್ಲಿ 7ನೇ ತರಗತಿ ಓದುತ್ತಿದ್ದ ಅಪ್ರಾಪ್ತೆಯನ್ನು 2022ರ ಜ.12ರಂದು ಅಪಹರಿಸಿದ್ದರು. ಪಾಲಕರು ಚನ್ನಗಿರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಸಿಪಿಐ ಪಿ.ಬಿ.ಮಧು ತನಿಖೆ ಕೈಗೊಂಡು, ಆರೋಪಿಗಳ ವಿರುದ್ಧ ಕೋರ್ಟ್‌ಗೆ ದೋಷರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಚನ್ನಗಿರಿಯ ಆರೋಪಿತರ ಮೇಲೆ ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದರು. ಎ1-ಆರೋಪಿ ಮನೋಹರ ಹಾಗೂ ಎ2-ಹನುಮಂತ, ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇದ್ದುದ್ದರಿಂದ ಸದರಿ ಬಂಧನದ ಅವಧಿ ಪರಿಗಣಿಸಿ ಶಿಕ್ಷಾ ಅವಧಿ ಸೆಟ್ ಆಫ್ ಮಾಡಿ ತೀರ್ಪು ನೀಡಿದರು.ಇಬ್ಬರಿಂದ ಬಂದ ದಂಡದ ಒಟ್ಟು ಮೊತ್ತ ₹45 ಸಾವಿರವನ್ನು ಸಂತ್ರಸ್ಥೆಗೆ ನೀಡುವಂತೆ ಹಾಗೂ ಸಂತ್ರಸ್ಥೆಗೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆ ತೀರ್ಪು ನೀಡಿದರು. ಪಿರ್ಯಾದಿ ಪರ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್, ಎ.ಎಂ.ಬಸವರಾಜ ನ್ಯಾಯ ಮಂಡನೆ ಮಾಡಿದರು.
- - -(ಸಾಂದರ್ಭಿಕ ಚಿತ್ರ)