ಸಾರಾಂಶ
ಮಹಿಳೆಯರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.
- ಸಂತ್ರಸ್ತರ ಪರ ಹೋರಾಟಕ್ಕೆ ಮಹಿಳಾ ಕಾಂಗ್ರೆಸ್ ಆಗ್ರಹ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಮಹಿಳೆಯರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.ನೂರಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವೂ ಅತ್ಯಂತ ಭಯಾನಕವಾಗಿದೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಕಳೆದ ಕೆಲವು ವರ್ಷಗಳಿಂದ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ, ದೌರ್ಜನ್ಯ ಎಸಗಿದ 3,000ಕ್ಕೂ ಹೆಚ್ಚು ವಿಡಿಯೋಗಳು ಕನ್ನಡಿಗರು ಮತ್ತು ಭಾರತೀಯರ ಆತ್ಮಸಾಕ್ಷಿಯನ್ನು ಅಲ್ಲಾಡಿಸಿವೆ ಎಂದಿದ್ದಾರೆ.
ಆರೋಪಿ ಪ್ರಜ್ವಲ್ ರೇವಣ್ಣ ಮಹಿಳೆಯರ ವಿರುದ್ಧ ದೌರ್ಜನ್ಯ ನಡೆಸಿದ್ದು, ದೇಶ ಬಿಟ್ಟು ಪರಾರಿಯಾಗುವಲ್ಲಿ ಯಶಸ್ವಿ ಆಗಿದ್ದಾರೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯನ್ನು ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ. ಯಾವ ವ್ಯಕ್ತಿ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದರೋ (ಪ್ರಜ್ವಲ್ ರೇವಣ್ಣ), ಯಾವ ವ್ಯಕ್ತಿಗಾಗಿ ಪ್ರಧಾನಿ ಮತ ಕೇಳಿದ್ದರೋ ಅಂತಹ ವ್ಯಕ್ತಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಈ ವಿಷಯ ಬಗ್ಗೆ ಏನು ಹೇಳುತ್ತಾರೆ? ಎಂದು ನಾನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಿದ್ದಾರೆ.ದಾವಣಗೆರೆ ಜಿಲ್ಲಾ ಮಹಿಳಾ ಬಿಜೆಪಿ ಮೋರ್ಚಾದವರು ಸಂತ್ರಸ್ತರ ಮನೆಗೆ ಸಾಂತ್ವನ ಹೇಳಲಿ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೋರಾಟ ನಡೆಸಲಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಗಳಮ್ಮ, ಮಂಜಮ್ಮ ಆಗ್ರಹಿಸಿದ್ದಾರೆ.
- - - (-ಸಾಂದರ್ಭಿಕ ಫೋಟೋ)