ಶಿವಯೋಗ ಮಂದಿರದ ವೈಭವದ ರಥೋತ್ಸವ

| Published : Feb 28 2025, 12:50 AM IST

ಸಾರಾಂಶ

ಧಾರ್ಮಿಕ ಶ್ರದ್ಧಾಕೇಂದ್ರ ಮದ್ವೀರಶೈವ ಶಿವಯೋಗ ಮಂದಿರದ ಕಾರಣಿಕ ಮಹಾಪುರುಷ ಹಾನಗಲ್ಲ ಕುಮಾರಸ್ವಾಮಿಗಳ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.

ಕನ್ನಡಪ್ರಭ ವಾರ್ತೆ ಬಾದಾಮಿ

ಧಾರ್ಮಿಕ ಶ್ರದ್ಧಾಕೇಂದ್ರ ಮದ್ವೀರಶೈವ ಶಿವಯೋಗ ಮಂದಿರದ ಕಾರಣಿಕ ಮಹಾಪುರುಷ ಹಾನಗಲ್ಲ ಕುಮಾರಸ್ವಾಮಿಗಳ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.

ಏಷ್ಯಾ ಖಂಡದಲ್ಲಿಯೇ ಅತಿ ಎತ್ತರದ (65ಅಡಿ) ಮಾಹಾರಥೋತ್ಸವಕ್ಕೆ ಪೂಜೆ ನೆರೆವೇರಿಸಿದ ಸಂಸ್ಥೆಯ ಅಧ್ಯಕ್ಷ, ಮೂರು ಸಾವಿರಮಠದ ಶ್ರೀ ಗುರುಸಿದ್ಧ ರಾಜಯೋಗೇಂದ್ರ ಸ್ವಾಮೀಜಿ ಚಾಲನೆ ನೀಡಿದರು.

ಶಿರಬಡಗಿ ಗ್ರಾಮದ ಭಕ್ತರು ತಂದ ಹಗ್ಗದಿಂದ ಭಕ್ತಗಣ ಶಿವನ ಹಾಗೂ ಶಿವಯೋಗಿಗಳ ಸ್ಮರಣೆ ಮೂಲಕ ರಥ ಎಳೆದರು. ಭಕ್ತರು ಹೂವು ಸಮರ್ಪಿಸುವ ಮೂಲಕ ಹರಕೆ ತೀರಿಸಿದರು.

ಸಂಸ್ಥೆಯ ಅಧ್ಯಕ್ಷರೂ ಆದ ಮೂರು ಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ, ಉಪಾಧ್ಯಕ್ಷರಾದ ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳ ನೇತೃತ್ವದಲ್ಲಿ ಪೂಜೆ ಕೈಂಕರ್ಯ ಜರುಗಿದವು.

ಮಾಹಾರಥೋತ್ಸವದಲ್ಲಿ ಹೊಳೆಹುಚ್ಚೇಶ್ವರ ಸ್ವಾಮೀಜಿ, ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ನೂರಾರು ಮಠಾಧೀಶರು,ಶ್ರೀಗಳು ವಟುಸಾಧಕರು ಇದ್ದರು.

ಮಾಜಿ ಶಾಸಕ ಎಂ.ಕೆ., ಪಟ್ಟಣಶೆಟ್ಟಿ ಧರ್ಮದರ್ಶಿ ಎಂ.ಬಿ. ಹಂಗರಗಿ, ಶರಣಪ್ಪಗೌಡ ಪಾಟೀಲ, ಪುರಸಭೆ ಸದಸ್ಯ ಮಂಜು ಹೊಸಮನಿ, ಕುಮಾರಗೌಡ ಜನಾಲಿ, ಎಂ.ಡಿ. ಯಲಿಗಾರ, ಹೊನ್ನಯ್ಯ ಹಿರೇಮಠ, ಸಿದ್ದನಗೌಡ ಪಾಟೀಲ, ಆರ್.ಬಿ. ಪಾಟೀಲ, ಮುಕ್ಕಣಗೌಡ ಜನಾಲಿ, ನಾಗರಾಜ ಕಾಚೆಟ್ಟಿ, ಬಸವರಾಜ ಪಾಟೀಲ, ಡಾ. ಆರ್.ಸಿ. ಭಂಡಾರಿ, ಯಲ್ಲಪ್ಪ ಪಾತ್ರೋಟಿ, ಪಂಪಣ್ಣ ಕಾಚೆಟ್ಟಿ, ಸಿಪಿಐ. ಕರೆಪ್ಪ ಬನ್ನೆ, ಪಿ.ಎಸ್.ಐ ವಿಠ್ಠಲ ನಾಯಕ, ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ತಾಲೂಕಿನ ಮಂಗಳೂರು ಗ್ರಾಮದ ಭಜನಾ ಮಂಡಳಿಯವರು ನಂದಿಕೋಲು ಮೆರವಣಿಗೆಯೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು ಗಮನ ಸೆಳೆಯಿತು.