ಜಮಖಂಡಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಗೋದಾಮು ಮೇಲೆ ಬುಧವಾರ ಸಂಜೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅನೀಲ ಬಡಿಗೇರ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ಅಕ್ರಮವಾಗಿ ಸಾಗಿಸಲು ಇಟ್ಟಿದ್ದ ಸುಮಾರು 10 ಟನ್‌ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.
ಜಮಖಂಡಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಗೋದಾಮು ಮೇಲೆ ಬುಧವಾರ ಸಂಜೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅನೀಲ ಬಡಿಗೇರ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಅಕ್ರಮವಾಗಿ ಸಾಗಿಸಲು ಇಟ್ಟಿದ್ದ ಸುಮಾರು 10 ಟನ್‌ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ. ನಗರದ ಆರ್‌ಟಿಓ ಕಚೇರಿಯ ಹಿಂಭಾಗ ಗಲಗಲಿ ಪುಸರ್ವಸತಿ ಕೇಂದ್ರದಲ್ಲಿ ನಿರ್ಮಿಸಿದ್ದ ಶೆಡ್‌ನಲ್ಲಿ ಸರ್ಕಾರದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.