ವಿಜಯಪುರ: ಅನ್ನಭಾಗ್ಯ ಯೋಜನೆಯಡಿಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪತ್ತೆ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಾಗೂ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಬಂಧಿತರಿಂದ 32,850 ಕೆಜಿ ಪಡಿತರ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾಂತೇಶ ಬಾಲಕನವರ, ಹನುಮೇಶ ಗೋನಾಳ ಬಂಧಿತ ಆರೋಪಿಗಳು. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದಾಳಿಯಲ್ಲಿ ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಎಎಸ್‌ಐ ಆರ್.ಎನ್.ಪರಗುಳಿ, ಸಿಬ್ಬಂದಿ ಬಸವರಾಜ ಅಂಬಿಗೇರ ಪಾಲ್ಗೊಂಡಿದ್ದರು ಎಂದು ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪಡಿತರ ಅಕ್ಕಿ ಸಾಗಣೆ: ಆರೋಪಿಗಳಿಬ್ಬರ ಸೆರೆ
ವಿಜಯಪುರ: ಅನ್ನಭಾಗ್ಯ ಯೋಜನೆಯಡಿಯ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪತ್ತೆ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಾಗೂ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಬಂಧಿತರಿಂದ 32,850 ಕೆಜಿ ಪಡಿತರ ಅಕ್ಕಿ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.