ಕನ್ನಡಪ್ರಭ ವಾರ್ತೆ ಮೈಸೂರುಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರೇ ಇಂದು ದೊಡ್ಡ ಮಟ್ಟದ ನಾಯಕರಾಗಿ, ಸಮಾಜದಲ್ಲಿ ಗಣ್ಯವ್ಯಕ್ತಿಗಳಾಗಿ ಹೊರ ಹೊಮ್ಮಿದ್ದಾರೆ. ಲಕ್ಷಾಂತರ ರೂಪಾಯಿ ಕೊಟ್ಟು ಖಾಸಗಿ ಶಾಲೆಗಳಿಗೆ ಪ್ರವೇಶ ಕೊಡಿಸುವ ಬದಲಿಗೆ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಸಲಹೆ ನೀಡಿದರು.ಮೈಸೂರು ತಾಲೂಕಿನ ರಟ್ನಹಳ್ಳಿಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ, ಶಾಲಾ ದಾಖಲಾತಿ ಆಂದೋಲನ ಹಾಗೂ ನೂತನ ಕೊಠಡಿಗಳನ್ನು ಅವರು ಉದ್ಘಾಟಿಸಿ ಮಾತನಾಡಿದರು.ಒಂದು ಕಾಲದಲ್ಲಿ ಸರ್ಕಾರಿ ಶಾಲೆಗಳು ಎಂದರೆ ಮಧ್ಯಮ ವರ್ಗ, ಶ್ರೀಮಂತರು ಮೂಗು ಮುರಿಯುತ್ತಿದ್ದರು. ಈಗ ಸರ್ಕಾರದಿಂದ ಶಾಲೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿಗೆ ಆದ್ಯತೆ ನೀಡಿರುವುದರಿಂದ ಹೆಚ್ಚಿನ ಮಕ್ಕಳನ್ನು ಸೇರಿಸಲಾಗುತ್ತಿದೆ. ಸರ್ಕಾರಿ ಶಾಲೆಯಲ್ಲಿ ಓದಿದವರೇ ದೊಡ್ಡ ದೊಡ್ಡ ನಾಯಕರು, ದೇಶದಲ್ಲಿ ಹೆಸರು ಮಾಡಿದವರಾಗಿದ್ದಾರೆ ಎಂದು ಅವರು ಹೇಳಿದರು.ಡಾ. ಎಪಿಜೆ ಅಬ್ದುಲ್ ಕಲಾಂ, ನರೇಂದ್ರ ಮೋದಿ, ಸಿದ್ದರಾಮಯ್ಯ ಸೇರಿದಂತೆ ಅನೇಕರು ಸರ್ಕಾರಿ ಶಾಲೆಯಲ್ಲೇ ಓದಿದವರಾಗಿದ್ದಾರೆ. ಸಾಲ- ಸೋಲ ಮಾಡಿ ಖಾಸಗಿ ಶಾಲೆಗಳಿಗೆ ಸೇರಿಸುವ ಬದಲಿಗೆ ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಮುಂದಾಗಬೇಕು ಎಂದು ಅವರು ಕರೆ ನೀಡಿದರು.ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಕಾಲೇಜುಗಳ ಜಾಗ ಒತ್ತುವರಿಯಾಗದಂತೆ ರಕ್ಷಣೆ ಮಾಡಬೇಕು. ಶಾಲೆಗಳ ಜಾತ ಒತ್ತುವರಿ ತೆರವುಗೊಳಿಸಿ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವ ಜತೆಗೆ ಹಕ್ಕುಪತ್ರ ಕೊಡಿಸುವ ಕೆಲಸ ನಡೆಸಲಾಗುತ್ತಿದೆ. ಇದರಿಂದಾಗಿ ಮುಂದಿನ ಹತ್ತಾರು ವರ್ಷಗಳ ಕಾಲ ಯಾವುದೇ ಸಮಸ್ಯೆಯಾಗಲ್ಲ. ಕೊಠಡಿಗಳ ನಿರ್ಮಾಣಕ್ಕೆ ಜಾಗ ಬಳಸಿಕೊಳ್ಳಬಹುದು ಎಂದರು. 50 ಲಕ್ಷ ವೆಚ್ಚದಲ್ಲಿ ಸೌಲಭ್ಯಸಾಯಿ ಗಾರ್ಮೆಂಟ್ಸ್‌ ನ ದೇವರಾಜ ಅರಸ್ ಅವರು ರಟ್ನಗಳ್ಳಿ ಗ್ರಾಮಕ್ಕೆ ಕೃಪೆ ತೋರಿ 50 ಲಕ್ಷ ರೂ. ವೆಚ್ಚದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿಸಿಕೊಟ್ಟಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡುವುದನ್ನು ಸರ್ಕಾರ ನಿಲ್ಲಿಸಿಬಿಟ್ಟಿದೆ. ಹೀಗಾಗಿ, ಖಾಸಗಿ ಸಂಸ್ಥೆಗಳ ನೆರವಿನಿಂದ ಶಾಲೆಗಳಿಗೆ ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.ಇದಕ್ಕೂ ಮೊದಲು ಶುದ್ಧ ಕುಡಿಯುವ ನೀರಿನ ಘಟಕ, ಹೈಟೆಕ್ ಶೌಚಾಲಯ, ಶಾಲಾ ಕಾಂಪೌಂಡ್ ಅನ್ನು ಶಾಸಕ ಜಿ.ಟಿ. ದೇವೇಗೌಡ ಉದ್ಘಾಟಿಸಿದರು.ಸಾಯಿ ಗಾರ್ಮೆಂಟ್ಸ್‌ ನ ದೇವರಾಜ ಅರಸ್, ಕವಿತಾ, ಡಿಡಿಪಿಐ ಉದಯ್ ಕುಮಾರ್, ಗುಂಗ್ರಾಲ್ ಛತ್ರ ಗ್ರಾಪಂ ಆಡಳಿತಾಧಿಕಾರಿ ಚಿಕ್ಕಣ್ಣ, ಬಿಇಒ ಪ್ರಕಾಶ್, ಪಿಡಿಒ ಶಿವಣ್ಣ, ಮುಖಂಡರಾದ ಯದುವರ, ಅರುಣ್‌ ಕುಮಾರ್, ಗ್ರಾಪಂ ಮಾಜಿ ಸದಸ್ಯರಾದ ರೇವಣ್ಣ, ಮಾದೇವಿ, ರೂಪಾ, ಮಂಜು, ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಮಾಲೇಗೌಡ, ಉಪಾಧ್ಯಕ್ಷ ಎಸ್. ರಘು, ತಾಲೂಕು ಅಧ್ಯಕ್ಷ ಸುಮತಿ ಉಪಾಧ್ಯಕ್ಷ ಶಿವಪ್ಪ, ಮುರಳಿಧರ್, ರಘು ಮೊದಲಾದವರು ಇದ್ದರು.---ಬಾಕ್ಸ್... ಎತ್ತಿನ ಗಾಡಿ ಸವಾರಿಗ್ರಾಮದ ಮುಖ್ಯರಸ್ತೆಯಿಂದ ಅಲಂಕೃತ ಎತ್ತಿನ ಗಾಡಿಯಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರಲಾಯಿತು. ಪೋಷಕರು ಪೂರ್ಣಕುಂಭ ಕಳಸ ಹೊತ್ತು ಸಾಗಿದರೆ, ಎತ್ತಿನ ಗಾಡಿಯಲ್ಲಿ ಮಕ್ಕಳನ್ನು ಮೆರವಣಿಗೆ ಮೂಲಕ ಕರೆತಂದಾಗ ಶಾಲಾ ಶಿಕ್ಷಕರು ಸ್ವಾಗತಿಸಿ ಬರ ಮಾಡಿಕೊಂಡರು. ಶಾಸಕ ಜಿ.ಟಿ. ದೇವೇಗೌಡ ಅವರು ಸಹ ಎತ್ತಿನಗಾಡಿ ಸವಾರಿ ಮಾಡುವ ಮೂಲಕ ಗಮನ ಸೆಳೆದರು.----ಕೋಟ್...ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೈಸೂರು ತಾಲೂಕು ಮೊದಲ ಸ್ಥಾನ ಪಡೆದಿದೆ. ದುಡಿಯುವ ಕೈಗಳಿಗೆ ಉದ್ಯೋಗ ದೊರೆಯಬೇಕು. ಮಕ್ಕಳಿಗೆ ಬರೀ ಶಿಕ್ಷಣ ಕೊಡಿಸುವುದು ಮುಖ್ಯವಲ್ಲ. ಭವಿಷ್ಯದ ನಾಯಕರಾಗುವ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿಸಬೇಕು. ಮಕ್ಕಳು ಮನೆಯಲ್ಲೇ ಪೋಷಕರು, ಶಾಲೆಯಲ್ಲಿ ಗುರುಗಳಿಗೆ ಗೌರವ ಕೊಡುವಂತೆ ನೀತಿ ಕಲಿಸಬೇಕು.- ಜಿ.ಟಿ. ದೇವೇಗೌಡ, ಶಾಸಕರು-----------------eom/mys/shekar/