ಸಾರಾಂಶ
ಶ್ರೀಗಳು ರವಿಶಾಸ್ತ್ರಿ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಸುಬ್ರಹ್ಮಣ್ಯ: ಕ್ರಿಕೆಟ್ ದಿಗ್ಗಜ, ಭಾರತ ತಂಡದ ಮಾಜಿ ಮುಖ್ಯ ಕೋಚ್ ಮತ್ತು ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಅವರು ಬುಧವಾರ ಸುಬ್ರಹ್ಮಣ್ಯದ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು. ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು. ಶ್ರೀಗಳು ರವಿಶಾಸ್ತ್ರಿ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.