ಸಾರಾಂಶ
ಚನ್ನಮ್ಮನ ಕಿತ್ತೂರು: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ.ಸಿ.ಎಂ. ತ್ಯಾಗರಾಜ ಭಾನುವಾರ ಕಿತ್ತೂರಿನ ಕಲ್ಮಠಕ್ಕೆ ಆಗಮಿಸಿ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿಯನ್ನು ಗೌರವಿಸಿ ಆಶೀರ್ವಾದ ಪಡೆದರು.
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ.ಸಿ.ಎಂ. ತ್ಯಾಗರಾಜ ಭಾನುವಾರ ಕಿತ್ತೂರಿನ ಕಲ್ಮಠಕ್ಕೆ ಆಗಮಿಸಿ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿಯನ್ನು ಗೌರವಿಸಿ ಆಶೀರ್ವಾದ ಪಡೆದರು.ಬಳಿಕ ಮಾತನಾಡಿದ ಅವರು, ಬರಲಿರುವ ದಿನಗಳಲ್ಲಿ ಕಿತ್ತೂರು ತಾಲೂಕಿನ ಯುವಕರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಅವಶ್ಯಕವಾಗಿರುವ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ತೆರೆಯುವ ಆಶಯ ವ್ಯಕ್ತಪಡಿಸಿ ಪೂಜ್ಯರ ಸಹಕಾರ ಮತ್ತು ಮಾರ್ಗದರ್ಶನ ಕೋರಿದರು.
ಕಲ್ಮಠದ ಶ್ರೀಗಳೂ ಸಹಿತ ಕುಲಪತಿ ಸತ್ಕರಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೆ ಎಲ್ಲ ರೀತಿಯ ಸಹಕಾರದ ಭರವಸೆ ನೀಡಿದರು.ವಿಶ್ರಾಂತ ಪ್ರಾಚಾರ್ಯರೂ ಮತ್ತು ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಡಾ.ಎಸ್.ಬಿ. ದಳವಾಯಿ ನೂತನ ಕುಲಪತಿಯನ್ನು ಬರಮಾಡಿಕೊಂಡು ಅವರು ಹೊಂದಿರುವ ಯೋಜನೆಗಳಿಗೆ ಸಂತಸ ವ್ಯಕ್ತಪಡಿಸಿ ಕೃತಜ್ಞತೆ ತಿಳಿಸಿದರು.