ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ನೋಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ. ಉಳಿದ ಗ್ಯಾರಂಟಿ ಯೋಜನೆಗಳು ಸಹ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿವೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಕಚೇರಿಯನ್ನು ನಗರದ ಜಿಪಂ ಕಚೇರಿ ಆವರಣದಲ್ಲಿ ಸ್ಥಾಪಿಸಲಾಗಿದ್ದು, ನೂತನ ಕಚೇರಿಯನ್ನು ಫೆ.01ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ಸೂರಜ್ ಎಂ.ಎನ್.ಹೆಗಡೆ, ಸಂಸದ ಗೋವಿಂದ ಕಾರಜೋಳ ಉಪಸ್ಥಿತರಿರುವರು.ಶಾಸಕ ಕೆಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚoದ್ರಪ್ಪ, ಮೇಲ್ಮನೆ ಸದಸ್ಯರಾದ ಚಿದಾನಂದ ಎಂ.ಗೌಡ, ಡಿ.ಟಿ.ಶ್ರೀನಿವಾಸ್, ಕೆ.ಎಸ್.ನವೀನ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ನಗರ ಸಭೆ ಅಧ್ಯಕ್ಷೆ ಬಿ.ಎಂ.ಸುಮಿರಾ ರಾಘವೇಂದ್ರ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸುವರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಗ್ಯಾರಂಟಿ ಯೋಜನೆಗಳ ಸವಿವರವಾಗಿ ಮಾಹಿತಿ ನೀಡಿದರು. ಈ ವೇಳೆ ಜಿಪಂ ಸಿಇಒ ಸೋಮಶೇಖರ್, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಜಿಪಂ.ಸಿಪಿಒ ಗಾಯತ್ರಿ, ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ಖಾದಿ ರಮೇಶ್, ನಾಗೇಶ್ ರೆಡ್ಡಿ, ಸದಸ್ಯರಾದ ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ತಾಲೂಕು ಅನುಷ್ಠಾನ ಸಮಿತಿ ಸದಸ್ಯ ಮದಸೀರ್ ನವಾಜ್ ಸೇರಿ ಅನೇಕರಿದ್ದರು.