ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ: ಡಿಸಿ

| Published : Sep 14 2025, 01:06 AM IST

ಸಾರಾಂಶ

ಜಿಲ್ಲೆಯಲ್ಲಿ ಸೆಪ್ಟೆಂಬರ್‌ 15 ರಿಂದ 45 ದಿನಗಳ ಕಾಲ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಲ್ಲಿ ಸೆಪ್ಟೆಂಬರ್‌ 15 ರಿಂದ 45 ದಿನಗಳ ಕಾಲ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸಮೀಕ್ಷೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಮಾಜಿ ದೇವದಾಸಿ ಮಹಿಳೆಯ ಮರು ಸಮೀಕ್ಷೆ ಕುರಿತು ಮಾಹಿತಿಯುಳ್ಳ ಪ್ರಚಾರದ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರ ಬೇಸ್ಲೈನ್ ಸಮೀಕ್ಷೆ ಆಯಾ ತಾಲೂಕಿನ ಆಸ್ಪತ್ರೆಗಳಲ್ಲಿರುವ ಎ.ಆರ್.ಟಿ ಕೇಂದ್ರ ಮತ್ತು ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತಿದೆ. ಈ ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿ ಮಹಿಳೆಯರು ಭಾಗವಹಿಸುವಂತೆ ಕೋರಿದರು. ಹೆಚ್ಚಿನ ಮಾಹಿತಿಗಾಗಿ ದೂಸಂ.08354-297464ಗೆ ಸಂಪರ್ಕಿಸಲು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಕೆ ಸೇರಿದಂತೆ ಮಿಲನ ಸಂಸ್ಥೆಯ ಪ್ರತಿನಿಧಿಗಳು ಇದ್ದರು.