ಡಿಜಿಟಲೀಕರಣ ಯುಗದಲ್ಲಿ ವಿಕಸಿತವಾಗಿರುವ ಭಾರತ ಸಾಕಷ್ಟು ಯುವಶಕ್ತಿ ಹೊಂದಿರುವ ದೇಶವಾಗಿದೆ. ಮಾನವ ಸಂಪನ್ಮೂಲ ಸದೃಢ ವಾಗಿದೆ. ಸಂಪನ್ಮೂಲಗಳನ್ನು ಸರಿಯಾಗಿ ಬಳಕೆ ಮಾಡಿ ಪ್ರಪಂಚದಲ್ಲಿ ಮೊದಲ ಸ್ಥಾನಕ್ಕೆ ಬರುತ್ತಿದೆ.
ಹಲಗೂರು:
ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬರೆದಿರುವ ಪುಸ್ತಕಗಳನ್ನು ಓದುವ ಮೂಲಕ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ನಡೆಯಬೇಕು ಎಂದು ಕರ್ನಾಟಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯಶಂಕರ್ ಕರೆ ನೀಡಿದರು.ಕೆಪಿಎಸ್ ಪ್ರೌಢಶಾಲೆ ಅವರಣದಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರೌಢಶಾಲಾ ಹಾಗೂ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಸೇರಿ ನಡೆಸಿದ 80ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದರು.
ಡಿಜಿಟಲೀಕರಣ ಯುಗದಲ್ಲಿ ವಿಕಸಿತವಾಗಿರುವ ಭಾರತ ಸಾಕಷ್ಟು ಯುವಶಕ್ತಿ ಹೊಂದಿರುವ ದೇಶವಾಗಿದೆ. ಮಾನವ ಸಂಪನ್ಮೂಲ ಸದೃಢ ವಾಗಿದೆ. ಸಂಪನ್ಮೂಲಗಳನ್ನು ಸರಿಯಾಗಿ ಬಳಕೆ ಮಾಡಿ ಪ್ರಪಂಚದಲ್ಲಿ ಮೊದಲ ಸ್ಥಾನಕ್ಕೆ ಬರುತ್ತಿದೆ ಎಂದರು.ಎಸ್ ಡಿಎಂಸಿ ಉಪಾಧ್ಯಕ್ಷ ಜಿ.ಮಹದೇವು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಕೃಷಿ ಸಚಿವ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸರ್ಕಾರಿ ಶಾಲೆಗಳ ಸೇವೆಯನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆ ಅನುರಾಧ, ಶಿಕ್ಷಕರು, ಎಸ್ಡಿಎಂಸಿ ಸದಸ್ಯರು ಇದ್ದರು.
ಕಲಾ ನಡಿಗೆ ನಿಮ್ಮ ಬಳಿಗೆ ಸುಗಮ ಸಂಗೀತಶ್ರೀರಂಗಪಟ್ಟಣ:ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗ 80ನೇ ಸ್ವಾತಂತ್ಯ್ರ ದಿನಾಚರಣೆ ಅಂಗವಾಗಿ ಹರ್ ಗರ್ ತಿರಂಗಾ ಕಾರ್ಯಕ್ರಮ ನಿಮಿತ್ತ ಕಲಾ ನಡಿಗೆ ನಿಮ್ಮ ಬಳಿಗೆ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.ಸುಗಮ ಸಂಗೀತ ಅಕಾಡೆಮಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಯಕ ಡೇವಿಡ್ ಹಾಗೂ ಬಳಗದಿಂದ ವಂದೇ ಮಾತರಂ ಸುಗಮ ಸಂಗೀತ ಹಾಗೂ ಭಕ್ತಿ ಗೀತೆಗಳನ್ನ ಹಾಡಿ ಭಕ್ತರು ಹಾಗೂ ಸಾರ್ವಜನಿಕರನ್ನು ರಚಿಸಿದರು.ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ರಾಘವೇಂದ್ರ ಸೇರಿದಂತೆ ಇತರರು ಇದ್ದರು.