ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸಿದ್ದತೆ

| Published : Jun 04 2024, 12:32 AM IST

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸಿದ್ದತೆ
Share this Article
  • FB
  • TW
  • Linkdin
  • Email

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ವಿಧಾನಸಭಾ ಕ್ಷೇತ್ರಗಳು, ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 8 ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಚುನಾವಣಾಧಿಕಾರಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ-ಬೆಂಗಳೂರು ಮಾರ್ಗದ ನಾಗಾರ್ಜುನ ಇಂಜನಿಯರಿಂಗ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಹಾಗೂ ಅಧಿಕಾರಿಗಳು ಮತ ಎಣಿಕೆ‌ ಕೇಂದ್ರಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತಾ ಕ್ರಮಗಳನ್ನು ಪರಿಶೀಲನೆ ಮಾಡಿದರು.

ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಮತ ಎಣಿಕೆ ಕೇಂದ್ರಕ್ಕೆ ಕೇವಲ ಎಣಿಕಾ ಸಿಬ್ಬಂದಿ ಹಾಗೂ ಏಜೆಂಟ್ ಗಳು ಸೇರಿದಂತೆ ಅನುಮತಿ ನೀಡಲಾದ ಮಾಧ್ಯಮದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಮತ ಎಣಿಕಾ ಕೇಂದ್ರದೊಳಗೆ ಮೊಬೈಲ್ ಸಂಪೂರ್ಣ ನಿಷೇಧ ಮಾಡಲಾಗಿದೆ ಎಂದು ವಿವರಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, 370ಕ್ಕೂ ಹೆಚ್ಚು ಮಂದಿ‌ ಮತ ಎಣಿಕಾ ಕಾರ್ಯದಲ್ಲಿ ತೊಡಗಿಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 600ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.3ಕೆಡಿಬಿಪಿ4- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಸಿದ್ದತೆ ವೀಕ್ಷಿಸಿದ ಚುನಾವಣಾಧಿಕಾರಿ ರವೀಂದ್ರ.3ಕೆಡಿಬಿಪಿ5-

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಟೇಬಲ್‌ಗಳ ವ್ಯವಸ್ಥೆ.