ವಿರಾಜಪೇಟೆ: ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವುದರ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ವಿರಾಜಪೇಟೆ ತಹಸೀಲ್ದಾರ್ ಪ್ರವೀಣ್ ಕುಮಾರ್ ಕಿವಿಮಾತು ಹೇಳಿದರು.

ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅನು ಕಾರ್ಯಪ್ಪ ಮಾತನಾಡಿ, ಪತ್ರಿಕೆಗಳನ್ನು ಕೊಂಡು ಓದುವವರ ಸಂಖ್ಯೆ ಕಡಿಮೆಯಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ಬರೆದಿದ್ದು, ವಿಷಯವನ್ನು ವಿವರವಾಗಿ ಬರೆಯಬೇಕು ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂದ ನಿರ್ದೇಶಕ ಬಿ.ಆರ್ ಸವಿತಾ ರೈ ಮಾತನಾಡಿ, ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನು ಓದುವುದು ಕಡಿಮೆಯಾಗಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಪತ್ರಿಕೆಗಳನ್ನು ಓದುವಂತಾಗಬೇಕು. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ನೀಡಿ, ಉತ್ತಮ ಪ್ರಜೆಗಳಾಗಬೇಕು ಎಂದು ಕರೆ ನೀಡಿದರು. ರಾಷ್ಟ್ರೀಯ ಸಮಿತಿ ಸದಸ್ಯರಾದ ಪಾರ್ಥ ಚಿಣ್ಣಪ್ಪ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ರೆಜಿತ್ ಕುಮಾರ್, ಪತ್ರಿಕಾ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು.

ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಬಾರ ಪ್ರಾಂಶುಪಾಲರಾದ ರೈಮಂಡ, ಹಿರಿಯ ಉಪನ್ಯಾಸಕಿ ದಮಯಂತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಉಪಾಧ್ಯಕ್ಷ ಎ.ಎನ್ ವಾಸು, ನಿರ್ದೇಶಕ ರವಿಕುಮಾರ್ ಎಂ.ಕೆ, ಸಂತೋಷ್ ರೈ, ವಿರಾಜಪೇಟೆ ತಾಲೂಕು ಸಂಘದ ಉಪಾಧ್ಯಕ್ಷ ಪುತ್ತಂ ಪ್ರದೀಪ್, ಖಜಾಂಚಿ ಹೇಮಂತ್ ಕುಮಾರ್, ನಿರ್ದೇಶಕರಾದ ಡಿ.ಮಂಜುನಾಥ್, ತೇಜಸ್ ಪಾಪಯ್ಯ, ಸದಸ್ಯರಾದ ಕಾಂಗೀರ ಬೋಪಣ್ಣ, ನೌಫಲ್ ಕಡಂಗ ಹಾಜರಿದ್ದರು.

ಬಹುಮಾನ ವಿತರಣೆ: ಪತ್ರಿಕಾ ದಿನಾಚರಣೆ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ‘ಅರಣ್ಯ ಜೀವ ವೈವಿದ್ಯತೆ ಮತ್ತು ಜಲಮೂಲಗಳ ಸಂರಕ್ಷಣೆ’ ಎಂಬ ವಿಷಯದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಸ್,ಇತಾ ಟಿ.ಎಂ ಪ್ರಥಮ, ನಿತ್ಯ ಪಿ.ಎನ್ ದ್ವಿತೀಯ, ಕೌಶಲ್ಯ ಪಿ.ಎಸ್ ತೃತೀಯ ಬಹುಮಾ ಪಡೆದರು. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ‘ಪಶ್ಚಿಮ ಘಟ್ಟದ ಪರಿಸರದ ಮಹತ್ವ ಎಂಬ ವಿಷಯದಲ್ಲಿ ನಡೆದ ಸ್ಪರ್ಧೆಯಲ್ಲಿ ಕೃತಿಕ ಎಂ.ಎಸ್ ಪ್ರಥಮ, ರಂಜಿತ ವೈ.ಎಂ ದ್ವಿತೀಯ ಹಾಗೂ ಇಸ್ಮಾ ಬೀಬಿ ತೃತೀಯ ಬಹುಮಾನ ಪಡೆದುಕೊಂಡರು.