ಸಾರಾಂಶ
ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಕಾಂಗ್ರೇಸ್ ಹೈಕಮಾಂಡ್ ಒಪ್ಪಿದರೆ ಸ್ಪರ್ಧಿಸಲು ಸಿದ್ದಳಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವೆ ಡಿ.ಕೆ. ತಾರಾದೇವಿ ಹೇಳಿದರು. ಇತ್ತೀಚೆಗೆ ಕೆಲವರು ತಾರಾದೇವಿಯವರಿಗೆ ವಯಸ್ಸಾಗಿದೆ, ಅನಾರೋಗ್ಯಪೀಡಿತರಾಗಿದ್ದಾರೆಂಬ ಸುಳ್ಳು ಸುದ್ದಿ ಹರಡುತ್ತಿ ರುವುದು ಸತ್ಯಕ್ಕೆ ದೂರವಾದ ಸಂಗತಿ. ನಾನು ಆರೋಗ್ಯಪೂರ್ಣವಾಗಿ, ಚೈತನ್ಯಭರಿತಳಾಗಿದ್ದೇನೆ. ಅವಕಾಶ ನೀಡಿದರೆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದರೆ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಬಹುದಾಗಿದೆ ಎಂದರು. ಈಗಾಗಲೇ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಿದ ಸಂದರ್ಭದಲ್ಲಿ ಉತ್ತಮ ಸ್ಪಂದನೆ ದೊರಕಿದೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಮಾಜಸೇವಾ ಸಂಸ್ಥೆಯನ್ನು ಹುಟ್ಟುಹಾಕಿ ಆ ಮೂಲಕ ಮಹಿಳೆಯರು, ಯುವಜನರ ಸಬಲೀಕರಣ, ಪರಿಸರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಲು ಚಿಂತನೆ ಇದೆ ಎಂದು ಹೇಳಿದರು. ಪೋಟೋ ಫೈಲ್ ನೇಮ್ 25 ಕೆಸಿಕೆಎಂ 2