ಬೆಳೆಹಾನಿ ಪರಿಹಾರಕ್ಕಾಗಿ ಹೋರಾಟಕ್ಕೆ ಸಜ್ಜಾಗಿ: ಎಸ್.ಬಿ. ಜೋಗಣ್ಣವರ

| Published : Oct 20 2025, 01:04 AM IST

ಸಾರಾಂಶ

ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಅತಿವೃಷ್ಟಿಯಿಂದ ಬೆಳೆಗಳು ಹಾನಿಗೀಡಾಗಿವೆ. ಕೂಡಲೇ ಬೆಳೆಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತರು ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗಬೇಕೆಂದು ಹೋರಾಟಗಾರರು ಮನವಿ ಮಾಡಿದರು.

ನರಗುಂದ: ಮುಂಗಾರು ಹಂಗಾಮಿನಲ್ಲಿ ತಾಲೂಕಿನ ರೈತರು ಬೆಳೆಹಾನಿ ಮಾಡಿಕೊಂಡು 2 ತಿಂಗಳ ಗತಿಸಿದರೂ ಸರ್ಕಾರ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡದೇ ಅನ್ಯಾಯ ಮಾಡುತ್ತಿದೆ ಎಂದು ರಾಜ್ಯ ರೈತಸೇನಾ ಸಂಘಟನೆಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆರೋಪಿಸಿದರು.

3645ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ತಾಲೂಕಿನ ರೈತರು 2025- 26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ವಾಣಿಜ್ಯ ಬೆಳೆಗಳಾದ ಹೆಸರು, ಗೋವಿನ ಜೋಳ, ಬಿಟಿ ಹತ್ತಿ, ಸೂರ್ಯಕಾಂತಿ, ತೊಗರಿ, ಈರಳ್ಳಿ ಸೇರಿದಂತೆ ಮುಂತಾದ ಬೆಳೆ ಬಿತ್ತನೆ ಮಾಡಿ ಪ್ರತಿ 1 ಎಕರೆಗೆ ₹20ರಿಂದ ₹30 ಸಾವಿರ ಖರ್ಚು ಮಾಡಿ ಉತ್ತಮ ಬೆಳೆ ಬೆಳೆಸಿದ್ದರು.

ಆದರೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಅತಿವೃಷ್ಟಿಯಿಂದ ಬೆಳೆಗಳು ಹಾನಿಗೀಡಾಗಿವೆ. ಕೂಡಲೇ ಬೆಳೆಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ರೈತರು ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಹೋರಾಟಕ್ಕೆ ಸಜ್ಜಾಗಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಸಿ.ಎಸ್. ಪಾಟೀಲ, ಸುಭಾಸ ಗಿರಿಯಣ್ಣವರ, ಹನುಮಂತ ಸರನಾಯ್ಕರ, ಯಲ್ಲಪ್ಪ ಚಲವಣ್ಣವರ, ಪರಮೇಶ ಅಣ್ಣಿಗೇರಿ, ಶಿವಪ್ಪ ಸಾತಣ್ಣವರ, ಶಂಕ್ರಪ್ಪ ಜಾಧವ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ಅರ್ಜುನ ಮಾನೆ, ವಾಸು ಚವಾಣ, ವಿಜಯಕುಮಾರ ಹೂಗಾರ ಮುಂತಾದವರು ಇದ್ದರು. ಮತದಾರರ ನೋಂದಣಿ ಅಭಿಯಾನ

ಗದಗ: ನಗರದ ಬಿ.ಎಫ್. ದಂಡಿನ ಕಾನೂನು ಮಹಾವಿದ್ಯಾಲಯದಲ್ಲಿ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರಲ್ಲಿ ಜಾಗೃತಿ ಮೂಡಿಸುವ ಹಾಗೂ ಮತದಾರರ ಪಟ್ಟಿಗೆ ಹೊಸದಾಗಿ ನೋಂದಣಿ ಮಾಡಿಸುವ ಅಭಿಯಾನ ಜರುಗಿತು.ಬಿಜೆಪಿ ವೈದ್ಯಕೀಯ ವಿಭಾಗದ ರಾಜ್ಯ ಸದಸ್ಯ ಡಾ. ಎಸ್.ವಿ. ಶಿವನಗೌಡರ ಅವರ ನೇತೃತ್ವದ ತಂಡ ಮತದಾರರ ನೋಂದಣಿಗೆ ಮನವಿ ಮಾಡಿತು.ಈ ವೇಳೆ ಮಹಾವಿದ್ಯಾಲಯದ ಡಾ. ಪುನೀತ ಬೆನಕನವಾರಿ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.