ಸಾರಾಂಶ
ಗಂಗಾವತಿ: ಕಾರ್ಮಿಕರ ಬೆವರಿನ ಫಲದಿಂದ ನಾವೆಲ್ಲರು ನೆಮ್ಮದಿಯಾಗಿ ಮನೆಯಲ್ಲಿ ಇರಲು ಸಾಧ್ಯವಿದೆ. ಬಿಸಿಲಲ್ಲಿ ದುಡಿಯುವ ದುಡಿಯುವ ವರ್ಗ ಸೂರಿಗಾಗಿ ಪರಿತಪಿಸುವಂತಾಗಿದೆ. ಎಲ್ಲರಿಗು ಬೆಳಕು ನೀಡುವ ವೈರ್‌ಮನ್‌ಗಲ ಬದುಕು ಬೆಳಕಾಗಲಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್.ಶ್ರೀನಾಥ್ ಹೇಳಿದರು.ಅವರು ಭಾನುವಾರ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಲ್ಯಾಣ ಕರ್ನಾಟಕ ವೈರ್‍ಮನ್ ಕಾರ್ಮಿಕರ ಸಂಘ ಉದ್ಘಾಟಿಸಿ ಮಾತನಾಡಿದರು.ಕಟ್ಟಡ ಕಾರ್ಮಿಕರು ಹಲವು ತೊಂದರೆಗಳ ನಡುವೆ ಕಾರ್ಯ ನಿರ್ವಹಿಸುತ್ತಿದ್ದು, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ. ಕಾರ್ಮಿಕರ ಕುಟುಂಬಕ್ಕೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಜೀವನ ಮಟ್ಟ ಸುಧಾರಣೆ ಮಾಡಿಕೊಳ್ಳಬೇಕೆಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಕಾರ್ಮಿಕರು ಬವಣೆ ನೀಗಿಸಲು ಸರ್ಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ತಮ್ಮ ಹೋರಾಟಕ್ಕೆ ನಾನು ಸದಾ ಬೆಂಬಲವಾಗಿ ನಿಲ್ಲುತ್ತೇನೆ ಎಂದರು.ವೃತ್ತ ಕಾರ್ಮಿಕ ನಿರೀಕ್ಷಕ ಜಿ.ಬಿ. ದೂಪದ್ ಮಾತನಾಡಿದರು.ನಾಗಭೂಷಣ ಶೀವಾಚಾರ್ಯರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಅಧ್ಯಕ್ಷ ನಾಗರಾಜ್ ಇಂಗಳಗಿ, ಗಂಗಾವತಿ ಎಂಜಿನಿಯರಿಂಗ್ ಅಸೋಸಿಯೇಷನ್ ಗಂಗಾವತಿ ತಾಲೂಕು ಅಧ್ಯಕ್ಷ ಚೇತನ್ ಕುಮಾರ್ ಹಿರೇಮಠ್, ಗಂಗಾವತಿ ಕಲ್ಯಾಣ ಕರ್ನಾಟಕ ವೈರ್‍ಮನ್ ಸಂಘದ ಕಾರ್ಮಿಕರ ಸಂಘದ ಅಧ್ಯಕ್ಷ ರಮೇಶ್, ಹಿರಿಯರಾದ ಸಂಗಮೇಶ್ ಇತರರಿದ್ದರು.