ಕನ್ನಡಪ್ರಭ ವಾರ್ತೆ ಸಿಂದಗಿ ಹಳ್ಳಿಗಳು ಸಮಗ್ರವಾಗಿ ಅಭಿವೃದ್ಧಿಯಾದಾಗ ಮಾತ್ರ ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯ ಸಾಕಾರಗೊಳ್ಳಲು ಸಾಧ್ಯವಾಗಲಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಸಿಂದಗಿ
ಹಳ್ಳಿಗಳು ಸಮಗ್ರವಾಗಿ ಅಭಿವೃದ್ಧಿಯಾದಾಗ ಮಾತ್ರ ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯ ಸಾಕಾರಗೊಳ್ಳಲು ಸಾಧ್ಯವಾಗಲಿದೆ ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.ತಾಲೂಕಿನ ಡಂಬಳ ಗ್ರಾಮದಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿ ಮತ್ತು ಪಂಚ ಉಪ ವಿಭಾಗ ಸಿಂದಗಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯೋಜನೆ ಅಡಿಯಲ್ಲಿ ತಾಲೂಕಿನ ಡಂಬಳ ತಾಂಡಾ ಗ್ರಾಮದಲ್ಲಿ ₹ 20 ಲಕ್ಷ ಅನುದಾನದಡಿ ಸಿಸಿ ರಸ್ತೆ ನಿರ್ಮಾಣದ ಕಾಮಗಾರಿಯ ಭೂಮಿ ಪೂಜಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ಉತ್ತಮ ಆರೋಗ್ಯ ಸೇವೆ, ಸಂಪರ್ಕ ಸೇವೆ ದೊರೆಯಲು ಇಂತಹ ರಸ್ತೆಗಳು ಸಹಕಾರಿಯಾಗಲಿವೆ. ಗ್ರಾಮಗಳಲ್ಲಿ ಕೇವಲ ದೇವಸ್ಥಾನಗಳ ನಿರ್ಮಾಣಕ್ಕೆ ಸೀಮಿತವಾಗದೆ, ಆಸ್ಪತ್ರೆಗಳು, ಗ್ರಂಥಾಲಯಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ನಿರ್ಮಾಣಕ್ಕೂ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಹಾಗೂ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ ಎಂದು ತಿಳಿಸಿದರು.ಸಿಂದಗಿ ಮತಕ್ಷೇತ್ರದ ಅನೇಕ ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯಗಳ ಯೋಜನೆಗಳು ನಮ್ಮ ಅಧಿಕಾರಾವಧಿಯಲ್ಲಿ ಮೂಡಿ ಬರುತ್ತದೆ. ಜನ ನೀಡಿದ ಅಧಿಕಾರ ಜನರಿಗಾಗಿ ಮುಡುಪಾಗಿಡುವುದು ನನ್ನ ಮುಖ್ಯ ಕರ್ತವ್ಯ, ಜನರ ಏಳಿಗೆಯೇ ನನ್ನ ಬದುಕಿನ ಮೂಲ ಮಂತ್ರವಾಗಿದ್ದು, ಉಳಿದ ಅಧಿಕಾರ ಅವಧಿಯಲ್ಲಿ ಬಾಕಿ ಇರುವ ಅನೇಕ ಕಾಮಗಾರಿಗಳನ್ನು ಕೂಡಲೇ ನಿರ್ಮಾಣ ಮಾಡುವ ಕನಸು ನನ್ನದಾಗಿದೆ ಎಂದು ಹೇಳಿದರು.ಈ ವೇಳೆ ಜಿಪಂ ಮಾಜಿ ಸದಸ್ಯ ಮಲ್ಲಣ್ಣ ಸಾಲಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವು ಹತ್ತಿ, ಎಪಿಎಂಸಿ ಅಧ್ಯಕ್ಷ ಕಲ್ಲಪ್ಪ ನಾಯ್ಕೊಡಿ, ಎಪಿಎಂಸಿ ಉಪಾಧ್ಯಕ್ಷ ಬಸವರಾಜ್ ಮಾರಲಾಬಾವಿ, ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯ ರವಿರಾಜ ದೇವರಮನಿ, ಮುದ್ದೇಗೌಡ ಬಿರಾದಾರ್, ಬಸನಗೌಡ ಪಾಟೀಲ್(ಡಂಬಳ), ಗೊಲ್ಲಾಳಪ್ಪಗೌಡ ಪಾಟೀಲ್, ಬಸು ಹದಗಲ್ಲ, ಶರಣಗೌಡ ಪಾಟೀಲ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.