ಸಾರಾಂಶ
ಕರ್ನಾಟಕ ರಾಜ್ಯವು ಇಂದು ಇಡೀ ದೇಶದ ಗಮನ ಸೆಳೆಯುತ್ತಿದೆ. ರಾಜ್ಯ ಎಲ್ಲ ರಂಗಗಳಲ್ಲೂ ಅಭಿವೃದ್ಧಿಯನ್ನು ಕಾಣುತ್ತಿದೆ. ಇದರೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಲಭ್ಯವನ್ನು ಒದಗಿಸುವತ್ತ ದಾಪುಗೋಲು ಇಡುತ್ತಿದೆ, ಸ್ವಾತಂತ್ರ್ಯ ಭಾರತ ಕಂಡಿದ್ದ ಕನಸನ್ನು ನನಸು ಮಾಡುವತ್ತ ರಾಜ್ಯ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಯಳಂದೂರು
ಕರ್ನಾಟಕ ರಾಜ್ಯವು ಇಂದು ಇಡೀ ದೇಶದ ಗಮನ ಸೆಳೆಯುತ್ತಿದೆ. ರಾಜ್ಯ ಎಲ್ಲ ರಂಗಗಳಲ್ಲೂ ಅಭಿವೃದ್ಧಿಯನ್ನು ಕಾಣುತ್ತಿದೆ. ಇದರೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಲಭ್ಯವನ್ನು ಒದಗಿಸುವತ್ತ ದಾಪುಗೋಲು ಇಡುತ್ತಿದೆ, ಸ್ವಾತಂತ್ರ್ಯ ಭಾರತ ಕಂಡಿದ್ದ ಕನಸನ್ನು ನನಸು ಮಾಡುವತ್ತ ರಾಜ್ಯ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಗುರುವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ೭೮ ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಶಕ್ತಿ ಯೋಜನೆಗಳ ಮೂಲಕ ಬಡವರು, ಮಧ್ಯಮ ವರ್ಗದವರು, ಮಹಿಳೆಯರು, ಯುವಕರನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದೆ.
ಸ್ವಾತಂತ್ರ್ಯ ನಂತರ ಭಾರತ ಯಾವ ದಿಕ್ಕಿಗೆ ಸಾಗಬೇಕು ಎಂಬುದಕ್ಕೆ ಸೂಕ್ತ ಹಾದಿಯನ್ನು ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಹಾಕಿಕೊಟ್ಟಿದ್ದಾರೆ. ಇದರೊಂದಿಗೆ ಅಭಿವೃದ್ಧಿಗೆ ಬೇಕಿರುವ ಅನೇಕ ಯೋಜನೆಗಳನ್ನು ಸರ್ಕಾರ ಮಾಡುತ್ತಿದ್ದು ಇಡೀ ರಾಜ್ಯ ದೇಶಕ್ಕೆ ಮಾದರಿಯಾಗುತ್ತಿದೆ. ಇದು ನಿಜ ಭಾರತದ ಕನಸನ್ನು ನನಸು ಮಾಡುವತ್ತ ರಾಜ್ಯ ಇಟ್ಟ ದಿಟ್ಟ ಹೆಜ್ಜೆಯಾಗಿದೆ. ಸ್ವಾತಂತ್ರ್ಯಕ್ಕಾಗಿ ದುಡಿದು ಮಡಿದ ವೀರರರಿಗೆ, ಯೋಧರ ತ್ಯಾಗ ಬಲಿದಾನಗಳಿಂದ ಪಡೆದ ಸ್ವಾತಂತ್ರ್ಯವನ್ನು ಅನುಭವಿಸಲು ಸೂಕ್ತ ವಾತಾವರಣ ನಿರ್ಮಿಸುವ ಗುರಿಯನ್ನು ರಾಜ್ಯ ಮಡುತ್ತಿದೆ. ಈ ಬಾರಿ ನಮ್ಮ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಂದಿದೆ. ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ನಾನು ಹೆಚ್ಚು ಶ್ರಮ ವಹಿಸುತ್ತೇನೆ. ಪಟ್ಟಣದಲ್ಲಿ ಒಂದು ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು. ಮುಖ್ಯ ಭಾಷಣ ಮಾಡಿದ ಉಪನ್ಯಾಸಕ ಉಮೇಶ್ ಮಾತನಾಡಿ, ದೇಶದ ಸ್ವಾತಂತ್ರ್ಯ ಸಂಗ್ರಾಮ, ಇದರ ಐತಿಹ್ಯ, ತ್ಯಾಗ, ಬಲಿದಾನ, ದೇಶ ಅಂದು ಇದ್ದ ಸ್ಥಿತಿಗಳ ಬಗ್ಗೆ ಬೆಳಕು ಚೆಲ್ಲಿದರು. ಅಲ್ಲದೆ ಈಗ ದೇಶ ಅಭಿವೃದ್ಧಿಯತ್ತ ದಾಪುಗೋಲು ಇಡುತ್ತಿದ್ದು ಇಡೀ ವಿಶ್ವವೇ ಬೆರಗಾಗಿ ನೋಡುವ ಹಂತಕ್ಕೆ ನಾವು ಬೆಳೆದಿದ್ದೇವೆ. ಚಂದ್ರಯಾನ ಮಾಡುತ್ತಿರುವ ನಮ್ಮ ಹೆಮ್ಮೆ ಇಂತಹ ನೂರಾರು ಉದಾಹರಣೆಗಳಿಗೆ ನಮ್ಮ ದೇಶ ಸಾಕ್ಷಿಯಾಗಿದೆ ಎಂದರು.ತಹಸೀಲ್ದಾರ್ ಜಯಪ್ರಕಾಶ್ ಧ್ವಜಾರೋಹಣ ನಡೆಸಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಗೀತೆಗಳ ನೃತ್ಯ, ಪೊಲೀಸ್ ಇಲಾಖೆ ಮತ್ತು ಶಾಲಾ ಮಕ್ಕಳು ನಡೆಸಿಕೊಟ್ಟ ಪೆರೇಡ್ ಗಮನ ಸೆಳೆಯಿತು. ಪಪಂ ಸದಸ್ಯರಾದ ಬಿ. ಲಕ್ಷ್ಮಿಮಲ್ಲು, ಸುಶೀಲಾಪ್ರಕಾಶ್ ಬಿಇಒ ಕೆ. ಕಾಂತರಾಜು, ಪಿಎಸ್‌ಐ ಹನುಮಂತ ಉಪ್ಪಾರ್ ಸರ್ಕಾರಿ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ನಂಜುಂಡಯ್ಯ, ರಾಜಸ್ವ ನಿರೀಕ್ಷಕ ಯದುಗಿರಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಎಂ. ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ನೌಕರರು, ಶಾಲಾ ಕಾಲೇಜು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.