ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಿಪಡಿಸಲು ಸಿದ್ದಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ ‘ಹೊಲೆಮಾದಿಗರ ಹಾಡು’ ಪ್ರಕಟಗೊಂಡಿತು.
ಕನ್ನಡಪ್ರಭ ವಾರ್ತೆ ತುಮಕೂರು
ಕಾವ್ಯವನ್ನೇ ಖಡ್ಗವಾಗಿಸಿಕೊಂಡು ದಲಿತರ ಪರವಾಗಿ ಸಾಮಾಜಿಕ ಸಮಾನತೆಗಾಗಿ ತಮ್ಮ ಬದುಕಿನುದ್ದಕ್ಕೂ ಹೋರಾಟ ನಡೆಸಿದ ಕನ್ನಡದ ಹೆಮ್ಮೆಯ ಬಂಡಾಯ ಕವಿ ಸಿದ್ದಲಿಂಗಯ್ಯನವರು ಎಂದು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್ ಹೇಳಿದ್ದಾರೆ.ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ಬಡವರ ನೋವನ್ನು ತಮ್ಮ ಬರವಣಿಗೆಯ ಮೂಲಕ ಜಗತ್ತಿಗೆ ಸಾದರಪಡಿಸಿದ ಸಾಹಿತ್ಯ ಲೋಕದ ಅಪ್ರತಿಮ ದೈತ್ಯ ಪ್ರತಿಭೆ ದಲಿತ ಕವಿ ಡಾ. ಸಿದ್ದಲಿಂಗಯ್ಯನವರ ಜನ್ಮ ದಿನಾಚರಣೆಯನ್ನು ನಗರದ ಅಮಾನಿಕೆರೆ ಗಾಜಿನ ಮನೆಯ ಆವರಣದಲ್ಲಿ ಆಚರಿಸಲಾಯಿತು. ಈ ವೇಳೆ ದಲಿತ ಕವಿ ಸಿದ್ದಲಿಂಗಯ್ಯರವರ ಕುರಿತು ಮಾತನಾಡಿದ ಅವರು, ಸಿದ್ದಲಿಂಗಯ್ಯನವರು ಪ್ರೊ. ಜಿ.ಎಸ್. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ `ಗ್ರಾಮದೇವತೆಗಳು'''''''''''''''' ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ ಪಿಎಚ್.ಡಿ. ಪದವಿ ಗಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ದಲಿಂಗಯ್ಯನವರು, ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿ ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನು ವ್ಯಕ್ತಿಪಡಿಸಲು ಸಿದ್ದಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ `ಹೊಲೆಮಾದಿಗರ ಹಾಡು'''''''''''''''' ಪ್ರಕಟಗೊಂಡಿತು. ಮುಂದೆ ಅವರ `ಸಾವಿರಾರು ನದಿಗಳು'''''''''''''''', `ಕಪ್ಪು ಕಾಡಿನ ಹಾಡು'''''''''''''''', `ಮೆರವಣಿಗೆ'''''''''''''''', `ನನ್ನ ಜನಗಳು ಮತ್ತು ಇತರ ಕವಿತೆಗಳು'''''''''''''''', `ಆಯ್ದ ಕವನಗಳು'''''''''''''''' ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ, ಇಂತಹ ಮಹಾನ್ ಚೇತನರ ಜನ್ಮ ದಿನಾಚರಣೆಯನ್ನು ಮಾಡುತ್ತಾ ಅವರು ಸಮಾಜಕ್ಕಾಗಿ ಮಾಡಿರುವ ಸೇವಾ ಕಾರ್ಯಗಳನ್ನು ನೆನೆಯುವುದಕ್ಕೆ ಬಹಳ ಖುಷಿ ಎನಿಸುತ್ತಿದೆ ಎಂದು ಸ್ಮರಿಸಿದರು.ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡುತ್ತಾ ಸಿದ್ದಲಿಂಗಯ್ಯನವರ `ಪಂಚಮ ಮತ್ತು ನೆಲಸಮ'''''''''''''''', `ಏಕಲವ್ಯ'''''''''''''''' ಪ್ರಮುಖ ನಾಟಕಗಳು, ಇವಲ್ಲದೆ ರಸಗಳಿಗೆಗಳು, ಎಡಬಲ, ಹಕ್ಕಿನೋಟ, ಜನಸಂಸ್ಕೃತಿ, ಉರಿಕಂಡಾಯ ಮುಂತಾದ ಲೇಖನಗಳನ್ನು ಬರೆದ ಖ್ಯಾತಿ ಅವರಿಗಿದೆ ಎಂದು ತಿಳಿಸಿದರು.
ಅವರ `ಊರು ಕೇರಿ'''''''''''''''' ಆತ್ಮಕಥೆ ಇಂಗ್ಲಿಷ್ ಹಾಗೂ ತಮಿಳಿಗೂ ಅನುವಾದಗೊಂಡಿದ್ದು ಇಂಗ್ಲಿಷ್ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡಮಿಯು ಪ್ರಕಟಿಸಿದೆ. ಅವರ ಹಲವಾರು ಕವಿತೆಗಳು ಇಂಗ್ಲಿಷ್, ಹಿಂದಿ, ತಮಿಳು, ಬಂಗಾಳಿ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ, ನಮ್ಮ ರಾಜ್ಯಕ್ಕೆ ಅತ್ಯಂತ ಕೀರ್ತಿ ತಂದುಕೊಟ್ಟ ಮಹಾನ್ ಕವಿ ಆಗಿದ್ದರು, ಅವರು ಅಪಾರ ದಲಿತ ವಿದ್ಯಾಮಣಿಗಳಿಗೆ ಕೀರ್ತಿಪ್ರದಾಯಕರೂ ಸಹ ಹೌದು ಎಂದರು.ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಎಸ್.ಲಕ್ಷ್ಮೀ ನಾರಾಯಣರವರು ಮಾತನಾಡಿ ಸಿದ್ಧಲಿಂಗಯ್ಯನವರ ಸೃಜನಶೀಲ ಸಾಹಿತ್ಯ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ ಸಂದಿದ್ದವು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಘಟಕದ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಅಟ್ರಾಸಿಟಿ ಕಮಿಟಿ ಸದಸ್ಯರಾದ ಗೋವಿಂದರಾಜ್ ಕೆ., ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಟೈಲರ್ ಜಗದೀಶ್, ಯುವ ಘಟಕದ ಕಾರ್ಯಾಧ್ಯಕ್ಷರಾದ ಮಾರ್ಗೋ ವೆಂಕಟೇಶ್ ಕೊತ್ತಿಹಳ್ಳಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ತ್ಯಾಗರಾಜ್ ಕೆ, ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷರಾದ ಹನುಮನರಸಯ್ಯ, ಮುಖಂಡರಾದ ನಟರಾಜ್ ಜಿ.ಎಲ್, ಇಲ್ಲಾಸ್ ಅಹಮದ್, ನಿರಂಜನ್, ಮಾರ್ಕೆಟ್ ಮಣ್ಣೆಪ್ಪ, ರಂಗಸ್ವಾಮಯ್ಯ ಕೊತ್ತಿಹಳ್ಳಿ, ಮಂಜುನಾಥ್, ಟಿ ಎನ್ ನರಸಿಂಹಮೂರ್ತಿ, ಮೋಯಿನ್ ಅಹಮದ್, ಇನ್ನು ಮುಂತಾದವರು ಉಪಸ್ಥಿತರಿದ್ದರು.