ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಕೆರೆಗಳಿಗೆ ಪುನರ್ಜನ್ಮ

| Published : Feb 17 2025, 12:33 AM IST

ಸಾರಾಂಶ

ಧರ್ಮಸ್ಥಳ ಕ್ಷೇತ್ರ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ಅವರ ಮುಂದಾಲೋಚನೆಯಿಂದ ಸಮಾಜದ ಅಭಿವೃದ್ಧಿ ಹಾಗೂ ಕೆರೆಗಳ ಮರುಜನ್ಮ ಕಲ್ಪಿಸುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥೆ ನಿರ್ದೇಶಕ ಎಂ.ಲಕ್ಷ್ಮಣ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಕೆರೆ ಹೂಳು ತೆರವಿಗೆ ಚಾಲನೆ ನೀಡಿ ಎಂ.ಲಕ್ಷ್ಮಣ್‌ ಅಭಿಮತ- - - ದಾವಣಗೆರೆ: ಧರ್ಮಸ್ಥಳ ಕ್ಷೇತ್ರ ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ ಅವರ ಮುಂದಾಲೋಚನೆಯಿಂದ ಸಮಾಜದ ಅಭಿವೃದ್ಧಿ ಹಾಗೂ ಕೆರೆಗಳ ಮರುಜನ್ಮ ಕಲ್ಪಿಸುವಲ್ಲಿ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥೆ ನಿರ್ದೇಶಕ ಎಂ.ಲಕ್ಷ್ಮಣ್ ಹೇಳಿದರು.

ತಾಲೂಕಿನ ಯರಗುಂಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಸುಮಾರು ₹56 ಕೋಟಿ ವೆಚ್ಚದಲ್ಲಿ 873 ಕೆರೆಗಳನ್ನು ಸಂಸ್ಥೆ ಮುಖಾಂತರ ಅಭಿವೃದ್ಧಿಪಡಿಸಲಾಗಿದೆ. ಸಂಸ್ಥೆ ವತಿಯಿಂದ ಹೂಳು ತುಂಬಿಕೊಂಡಿರುವ ಕೆರೆಗಳನ್ನು ಆಯ್ಕೆ ಮಾಡಿ ಅಂತಹ ಕೆರೆಗಳ ಅಭಿವೃದ್ಧಿ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳಾದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಆರೋಗ್ಯ ಅರಿವು ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳುವಲ್ಲಿ ಧರ್ಮಸ್ಥಳ ಸಂಸ್ಥೆ ಮುಂದಾಗಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ, ಪುರಾತನ ಕಾಲದ ಕೆರೆಗಳನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ನೀರಿನ ಸಂಗ್ರಹಣೆ ಹಿನ್ನೆಡೆಯಿಂದಾಗಿ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿದೆ. ನೀರಿನ ಮೂಲಗಳನ್ನು ಅಭಿವೃದ್ಧಿಪಡಿಸಿ ಅಂತರ್ಜಲಮಟ್ಟ ಹೆಚ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಸಾಕಷ್ಟು ಜನಪರ ಯೋಜನೆಗಳನ್ನು ನಡೆಸುತ್ತಿದೆ. ಸರ್ವರೂ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾಪೌರ ಕೆ.ಚಮನ್‌ಸಾಬ್, ನೆಲಜಲ ಸಂರಕ್ಷಣಾ ಹೋರಾಟಗಾರ ರವಿಕುಮಾರ ಬಲ್ಲೂರು ಮಾತನಾಡಿದರು. ಉಪ ಮಹಾಪೌರ ಸೋಗಿ ಶಾಂತಕುಮಾರ್, ಸಮಿತಿ ಅಧ್ಯಕ್ಷ ಬಸವರಾಜ್, ಚೇತನಾ ಶಿವಕುಮಾರ್, ಯೋಜನಾಧಿಕಾರಿಗಳದ ಶ್ರೀನಿವಾಸ್ ಬಿ., ಎಂಜಿನಿಯರ್ ಹರೀಶ್, ಕೃಷಿ ಅಧಿಕಾರಿ ಪ್ರವೀಣ್, ನರೇಂದ್ರ, ಮೇಲ್ವಿಚಾರಕರಾದ ಚಂದ್ರಶೇಖರ, ವಿಶಾಲ, ಸೇವಾ ಪ್ರತಿನಿಧಿಗಳು, ಕೆರೆ ಸಮಿತಿ ಸದಸ್ಯರು, ಒಕ್ಕೂಟ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

- - -

-15ಕೆಡಿವಿಜಿ33.ಜೆಪಿಜಿ:

ದಾವಣಗೆರೆ ತಾಲೂಕಿನ ಯರಗುಂಟೆಯಲ್ಲಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಎಂ.ಲಕ್ಷ್ಮಣ್ ಗುದ್ದಲಿ ಪೂಜೆ ನೆರವೇರಿಸಿದರು.