ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ತುಳುಕೂಟ ಉಡುಪಿ ವತಿಯಿಂದ ಸಂಭ್ರಮಾಚರಣೆ ''''ತುಳುವೆರೆ ದಿಬ್ಬಣ'''' ಅದ್ದೂರಿಯಾಗಿ ನಡೆಯಿತು.

ಉಡುಪಿ ; ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ತುಳುಕೂಟ ಉಡುಪಿ ವತಿಯಿಂದ ಸಂಭ್ರಮಾಚರಣೆ ''''''''''''''''ತುಳುವೆರೆ ದಿಬ್ಬಣ'''''''''''''''' ಅದ್ದೂರಿಯಾಗಿ ನಡೆಯಿತು.

ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ನೇತೃತ್ವದಲ್ಲಿ ನಡೆದ ತುಳುವೆರೆ ದಿಬ್ಬಣಕ್ಕೆ ಕುಂಜಿಬೆಟ್ಟು ರಿಕ್ಷಾ ನಿಲ್ದಾಣದಿಂದ ಚಾಲನೆ ನೀಡಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಕೆ. ರಘುಪತಿ ಭಟ್ ಮುಂತಾದವರು ಮೆರವಣಿಗೆಯಲ್ಲಿ ಪಾಲ್ಗೊಂಡರು. ವೈಭವದ ಮೆರವಣಿಗೆಯಲ್ಲಿ ಅತಿಥಿಗಳನ್ನು ಅಲಂಕೃತ ವಾಹನದಲ್ಲಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣಕ್ಕೆ ಕರೆತರಲಾಯಿತು.ನಂತರ ನಡೆದ ''''''''''''''''ತುಳು ಭಾಷಾ ಮಾನ್ಯತೆ ಸಂಭ್ರಮ - ತುಳು ಮಿನದನ'''''''''''''''' ಹಾಗೂ ವಿಶ್ವಪ್ರಭಾ ಪ್ರಾಯೋಜಿತ ಎಸ್.ಯು. ಪಣಿಯಾಡಿ ನೆನಪಿನ ತುಳು ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಮುಖ್ಯ ಅತಿಥಿ ಶಾಸಕ ಯಶಪಾಲ್ ಸುವರ್ಣ, ತುಳು ಸಂಘಟನೆಗಳು ಒಗ್ಗೂಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮುಂದೆ ಒಗ್ಗಟ್ಟು ಪ್ರದರ್ಶಿಸಿ, ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವುದಕ್ಕೆ ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು.ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಗಳೂರು ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಅವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತುಳು ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ತುಳು ಚಳವಳಿಯ ನೇತಾರ ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡಲಾಗುವ 31ನೇ ವರ್ಷದ ಕಾದಂಬರಿ ಪ್ರಶಸ್ತಿಯನ್ನು ಪುತ್ತೂರಿನ ಉಪತಹಶೀಲ್ದಾರ್ ಸುಲೋಚನಾ ಪಿ.ಕೆ. ಅವರ ''''''''''''''''ದಧೂಟಿಬನ'''''''''''''''' ಕಾದಂಬರಿಗೆ ಪ್ರದಾನಿಸಲಾಯಿತು.

ಅಖಿಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷ ಬರೋಡಾ ಶಶಿಧರ ಶೆಟ್ಟಿ, ತುಳು ಸಂಘ ಬರೋಡಾದ ಗೌರವಾಧ್ಯಕ್ಷ ದಯಾನಂದ ಬೋಂಟ್ರ, ಯುವ ಉದ್ಯಮಿ ಸುಭಾಷ್ ಸಾಲ್ಯಾನ್ ನೆಲ್ಲಿಕಟ್ಟಿ, ಸಾಂಗ್ಲಿ ದಿವಾಕರ್, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ, ಬಹ್ಮನ್ ರಾಜಕುಮಾ‌ರ್, ತುಳುಕೂಟದ ಉಪಾಧ್ಯಕ್ಷರಾದ ಭುವನ ಪ್ರಸಾದ್ ಹೆಗ್ಡೆ, ಡಾ. ವಿ.ಕೆ. ಯಾದವ್, ಶೋಭಾ ಶೆಟ್ಟಿ, ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ತುಳುವೆರೆ ದಿಬ್ಬಣ ಸಂಚಾಲಕ ದಿವಾಕರ್ ಸನಿಲ್, ಹೃದಯಂ ಫೌಂಡೇಶನ್‌ನ ಪ್ರವರ್ತಕ ಸುಭಾಷ್ ಸಾಲ್ಯಾನ್ ನೆಲ್ಲಿಕಟ್ಟೆ, ಶೋಭಾ ಮೊದಲಾದವರು ಉಪಸ್ಥಿತರಿದ್ದರು.ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಂಚಾಲಕ ಪ್ರಕಾಶ್ ಸುವರ್ಣ ಕಟಪಾಡಿ ವಂದಿಸಿದರು. ನಿವೃತ್ತ ಉಪನ್ಯಾಸಕ ದಯಾನಂದ ಡಿ. ಕಿದಿಯೂರು ನಿರೂಪಿಸಿದರು.