ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯನ್ನಾಗಿ ಘೋಷಿಸುವ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಚಿವರಿಗೆ ಉಡುಪಿ ತುಳುಕೂಟದ ಅಧ್ಯಕ್ಷರಾ ಬಿ. ಜಯಕರ ಶೆಟ್ಟಿ ಇಂದ್ರಾಳಿ ಧನ್ಯವಾದ ಸಲ್ಲಿಸಿದ್ದಾರೆ.
ಉಡುಪಿ : ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯನ್ನಾಗಿ ಘೋಷಿಸುವ ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಚಿವರಿಗೆ ಉಡುಪಿ ತುಳುಕೂಟದ ಅಧ್ಯಕ್ಷರಾ ಬಿ. ಜಯಕರ ಶೆಟ್ಟಿ ಇಂದ್ರಾಳಿ ಧನ್ಯವಾದ ಸಲ್ಲಿಸಿದ್ದಾರೆ.
ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮೂಲಕ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ತುಳುವರ ಪರವಾಗಿ ಕಾಳಜಿ ವಹಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಮುಂದೆ ಈ ವಿಚಾರವನ್ನು ನಿರಂತರವಾಗಿ ಮಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪುತ್ತೂರಿನ ಶಾಸಕರಾದ ಅಶೋಕ್ ರೈ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ವರದಿ ಸಲ್ಲಿಸಿದ್ದ ಡಾ. ಎಂ. ಮೋಹನ್ ಆಳ್ವ ಮತ್ತು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರಿದ ಅಖಿಲ ಭಾರತ ತುಳುಒಕ್ಕೂಟದ ಅಧ್ಯಕ್ಷ ಎ. ಸಿ. ಭಂಡಾರಿ ಹಾಗೂ ದೇಶ-ವಿದೇಶಗಳ ಎಲ್ಲಾ ತುಳು ಸಂಘ-ಸಂಸ್ಥೆಗಳಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.