ಪ್ರತಿಭೆ, ಕೌಶಲ್ಯ ಗುರುತಿಸಿ ಪ್ರೋತ್ಸಾಹಿಸಿ

| Published : Jan 13 2024, 01:36 AM IST

ಸಾರಾಂಶ

ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯ-ಪುಸ್ತಕದ ವಿಷಯಗಳೊಂದಿಗೆ ಮಕ್ಕಳಲ್ಲಿನ ಪ್ರತಿಭೆ ಮತ್ತು ಕೌಶಲ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯವಿದೆ ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತ ಮಹಾವೀರ ಪಡನಾಡ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯ-ಪುಸ್ತಕದ ವಿಷಯಗಳೊಂದಿಗೆ ಮಕ್ಕಳಲ್ಲಿನ ಪ್ರತಿಭೆ ಮತ್ತು ಕೌಶಲ್ಯಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯವಿದೆ ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತ ಮಹಾವೀರ ಪಡನಾಡ ಹೇಳಿದರು.

ಪಟ್ಟಣದ ವಿವೇಕಾನಂದ ವಿದ್ಯಾ ವಿಕಾಸ ಸಂಸ್ಥೆಯ ಆವರಣದಲ್ಲಿ ಮಕ್ಕಳ ಸಾಂಸ್ಕೃತಿಕ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಜೀವನ ರೂಪಿಸಲು ಶಿಕ್ಷಣ ಬಹಳ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಭಾವಿ ಭವಿಷ್ಯ ರೂಪಗೊಳ್ಳುವುದು ಶಾಲೆಗಳಲ್ಲಿ. ಸಹೋದರತ್ವ ಸಂದೇಶವನ್ನು ಜಗತ್ತಿಗೆ ಸಾರಿದ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಆರಂಭವಾದ ಈ ಸಂಸ್ಥೆಯು ಅವರ ತತ್ವಾದರ್ಶಕಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೊಹಮ್ಮದ್ ಕೆ ಮುಲ್ಲಾ ಮುಖ್ಯ ಅತಿಥಿಗಳಾಗಿ ಮಾತನಾಡಿ, ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ. ಅದನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ನಮ್ಮ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕು. ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ನೀಡಿದರೇ ಸಾಲದು. ಅವರಿಗೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವುದರ ಜೊತೆಗೆ ಆತ್ಮವಿಶ್ವಾಸ ತುಂಬುವ ಶಿಕ್ಷಣ ನೀಡಬೇಕು. ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿರುವ ಮೊಬೈಲ್ ಮತ್ತು ದೂರದರ್ಶನ ಬಳಕೆ ಹಿತಮಿತವಾಗಿರಬೇಕು ಎಂದು ಕಿವಿಮಾತು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಲಲಿತಾ ಮೇಕನಮರಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಅನೇಕ ಶಿಕ್ಷಣ ಸಂಸ್ಥೆಗಳಿಗೆ, ದೇವಸ್ಥಾನಗಳಿಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ದಾನ ಧರ್ಮ ಮಾಡುವ ಮೂಲಕ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ದಾನವೀರ, ಸಹಕಾರಿ ಧುರೀಣ ಮಹಾವೀರ ಪಡನಾಡ ಅವರಿಗೆ ಸಂಸ್ಥೆಗೆ ವತಿಯಿಂದ ಸನ್ಮಾನಿಸಲಾಯಿತು. ಇದೇ ವೇಳೆ ಕನ್ನಡಪ್ರಭ ದಿನಪತ್ರಿಕೆಯಲ್ಲಿ ಅವರ ಸಮಾಜಮುಖಿ ಮತ್ತು ಸಾಧನೆಯ ಕುರಿತು ಪ್ರಕಟಗೊಂಡ ಲೇಖನದ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ವೇಳೆ ಸಂಸ್ಥೆಯ ಅಧ್ಯಕ್ಷ ಡಿ.ಡಿ.ಮೇಕನಮರಡಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಣ್ಣಾಸಾಬ ತೆಲಸಂಗ, ಜಯಶ್ರೀ ಸಿ. ಖಿನಿಂಗೆ, ಸಮೂಹ ಸಂಪನ್ಮೂಲ ಅಧಿಕಾರಿ ಎನ್.ಎಂ.ಮಠಪತಿ, ನಿವೃತ್ತ ಸೈನಿಕ ಎನ್.ಎಂ.ಸಾಳುoಕೆ, ಮುಖ್ಯೋಪಾಧ್ಯಾಯ ಪ್ರಶಾಂತ ಮುನ್ನೋಳ್ಳಿ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು. ಅನಿಲ ಗುರುವ ಸ್ವಾಗತಿಸಿದರು. ಪೂಜಾ ಉಪಾಧ್ಯ ಮತ್ತು ಎಸ್.ಕೆ.ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು. ಕು.ಅಕ್ಷತಾ ಕೆಂಗಣ್ಣವರ ವಂದಿಸಿದರು.

ಪ್ರತಿಯೊಬ್ಬರ ಜೀವನ ರೂಪಿಸಲು ಶಿಕ್ಷಣ ಬಹಳ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಭಾವಿ ಭವಿಷ್ಯ ರೂಪಗೊಳ್ಳುವುದು ಶಾಲೆಗಳಲ್ಲಿ. ಸಹೋದರತ್ವ ಸಂದೇಶವನ್ನು ಜಗತ್ತಿಗೆ ಸಾರಿದ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಆರಂಭವಾದ ಈ ಸಂಸ್ಥೆಯು ಅವರ ತತ್ವಾದರ್ಶಕಗಳನ್ನು ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡುತ್ತಿದೆ.

-ಮಹಾವೀರ ಪಡನಾಡ,

ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರು.