ಮಳವಳ್ಳಿ: ರಾಜಕೀಯದಲ್ಲಿ ಹಿರಿತನವಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ವರಿಷ್ಠರು ಸಚಿವ ಸ್ಥಾನ ನೀಡುವ ಮೂಲಕ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಮನ್ಮುಲ್ ನಿರ್ದೇಶಕ ಆರ್.ಎನ್ ವಿಶ್ವಾಸ್ ಮನವಿ ಮಾಡಿದರು.

ಶಾಸಕ ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡಲು ಶಿಫಾರಸ್ಸು ಮಾಡುವಂತೆ ಒತ್ತಾಯಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಪಟ್ಟಣದ ಪ್ರವಾಸಿ ಮಂದಿರದಿಂದ ತೆರಳಿದ್ದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ ವೇಳೆ ಮಾತನಾಡಿದರು. ಮೂರು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿ ಅನುಭವ ಹೊಂದಿರುವ ನರೇಂದ್ರಸ್ವಾಮಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿತು. 2023ರಲ್ಲೂ ನಿರೀಕ್ಷೆ ಹುಸಿಯಾಯಿತು. ಪ್ರಸ್ತುತ ಸಚಿವ ಸಂಪುಟದಲ್ಲಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಈ ಬಾರಿ ನಮ್ಮ ನಾಯಕರಿಗೆ ಸಚಿವ ಸ್ಥಾನ ನೀಡುವ ನಿಟ್ಟಿನಲ್ಲಿ ನೀವು ಒತ್ತಾಸೆಯಾಗಬೇಕೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಮನ್ಮುಲ್ ನಿರ್ದೇಶಕ ಡಿ.ಕೃಷ್ಣಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಲಿಂಗರಾಜು, ನಿರ್ದೇಶಕರಾದ ಕೆ.ಜೆ.ದೇವರಾಜು, ಸತೀಶ್, ದಿಲೀಪ್ ಕುಮಾರ್, ಮುಖಂಡರಾದ ಚಿಕ್ಕಲಿಂಗಯ್ಯ, ಚನ್ನಪಿಳ್ಳೆಕೊಪ್ಪಲು ಸಿದ್ದೇಗೌಡ, ಬಿ.ಮಹದೇವು, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ಮುಟ್ಟನಹಳ್ಳಿ ಅಂಬರೀಶ್, ಸಿ.ವೇದಮೂರ್ತಿ, ಚಂದ್ರಕುಮಾರ್, ಸಿ.ಮಾಧು, ಪುಟ್ಟಸ್ವಾಮಿ, ಹುಸ್ಕೂರು ಎಚ್.ಕೆ.ಕೃಷ್ಣಮೂರ್ತಿ, ಕುಂದೂರು ಪ್ರಕಾಶ್, ಶಿವಕುಮಾರ್, ಪ್ರಸನ್ನ, ಪೇಟೆ ರವಿ, ಶಶಿರಾಜ್, ಎಂ.ಎನ್.ಜಯರಾಜು, ಪೂರಿಗಾಲಿ ದೀಪು, ಪ್ರಸನ್ನ, ಮಹದೇವಸ್ವಾಮಿ, ಚೇತನ್ ನಾಯಕ್, ಕೃಷ್ಣ, ಶಾಂತರಾಜು ಮತ್ತಿತರರು ಪಾಲ್ಗೊಂಡಿದ್ದರು.