ಗಂಗಾವತಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸೇರಿದಂತೆ ತಾಲೂಕಿನ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅಭಿಪ್ರಾಯ ಪಡೆದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ವಿಪ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು.
ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯ ಎಲ್ಲ ಮುಖಂಡರನ್ನು ವೀಕ್ಷಕರು ಭೇಟಿಯಾಗಿದ ಅಭಿಪ್ರಾಯ ಪಡೆಯುತ್ತಿದ್ದಾರೆ. ಅದರಂತೆ ಗಂಗಾವತಿ ನಗರಕ್ಕೆ ವೀಕ್ಷಕರು ಆಗಮಿಸಿ ಅಭಿಪ್ರಾಯ ಪಡೆದು 5ರಿಂದ 6 ಜನ ಮುಖಂಡರ ಹೆಸರು ಕೆಪಿಸಿಸಿಗೆ ಕಳಿಸಿಕೊಡಲಾಗುತ್ತದೆ ಎಂದರು.ಕಾಂಗ್ರೆಸ್ ಸಂಘಟನೆ ಮತ್ತು ಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ನಾಯಕರನ್ನು ಗುರುತಿಸಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ರಾಯಚೂರು ಎಪಿಎಂಸಿ ಮಾಜಿ ಅಧ್ಯಕ್ಷ ಶಾಂತಪ್ಪ ಇದ್ದರು.