ಬಿಜೆಪಿಯ ನಾಲ್ವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು

| Published : Nov 06 2024, 11:53 PM IST

ಬಿಜೆಪಿಯ ನಾಲ್ವರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾ.ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭ ಅಡ್ಡ ಮತದಾನ ಮಾಡಿದ ದೂರಿನ ಹಿನ್ನೆಲೆ ಬಿಜೆಪಿ ಬೆಂಬಲಿತ ನಾಲ್ವರು ಗ್ರಾ.ಪಂ. ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಪಕ್ಷದ ರಾಜ್ಯ ಸಮಿತಿಗೆ ಶಿಫಾರಸ್‌ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜ.30 ರಂದು ನಡೆದ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಡ್ಡಂಡ ನಿಲನ್ ಮಂದಣ್ಣ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ವಿ.ಎಂ.ವಿಜಯ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರ ವಿರುದ್ಧ ಪಕ್ಷದ ಸದಸ್ಯರು ಮತ್ತು ಪಕ್ಷದ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಾದ ವಿಮಲಾ ಎಂ.ಬಿ,. ಆರತಿ ಸುರೇಶ್ ಎ. ಹಾಗೂ ರಮೇಶ್ ಪಿ.ಟಿ. ಅಡ್ಡ ಮತದಾನ ಮಾಡಿದ್ದಾರೆ ಎಂದು ಶಕ್ತಿ ಕೇಂದ್ರದ ಪ್ರಮುಖರು ಮತ್ತು ಮಂಡಲ ಅಧ್ಯಕ್ಷರು ಸೂಚಿಸಿದ ಮೇರೆಗೆ ಮುಂದಿನ ಶಿಸ್ತು ಕ್ರಮಕ್ಕಾಗಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಲಾಗಿದೆ.

ಆ.28 ರಂದು ನಡೆದ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅರ್ಭ್ಯಥಿಯಾಗಿ ಅನು ಕುಮಾರ್ ಸ್ಪರ್ಧಿಸಿದ್ದರು. ಇವರ ವಿರುದ್ಧ ಪಕ್ಷದ ಸದಸ್ಯರು ಮತ್ತು ಪಕ್ಷದ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರಾದ ಪ್ರಮಿಳಾ ಯೋಗೇಶ್ ಅಡ್ಡ ಮತದಾನ ಮಾಡಿರುವ ಬಗ್ಗೆ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಮಂಡಲ ಅಧ್ಯಕ್ಷರು ಸೂಚಿಸಿದ ಮೇರೆಗೆ ಶಿಸ್ತು ಕ್ರಮಕ್ಕಾಗಿ ರಾಜ್ಯ ಸಮಿತಿಗೆ ಶಿಫಾರಸ್‌ ಮಾಡಲಾಗಿದೆ ಎಂದು ರವಿ ಕಾಳಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.