ವಿಶೇಷಚೇತನರ ಪಾಲಿಟೆಕ್ನಿಕ್‌ ನಲ್ಲಿ ಚಿತ್ರಕಲಾ ಸ್ಪರ್ಧೆ

| Published : Oct 25 2024, 12:56 AM IST

ವಿಶೇಷಚೇತನರ ಪಾಲಿಟೆಕ್ನಿಕ್‌ ನಲ್ಲಿ ಚಿತ್ರಕಲಾ ಸ್ಪರ್ಧೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಾಮಾಣಿಕ ಸಂಸ್ಕೃತಿಯಿಂದ ರಾಷ್ಟ್ರದ ಸಮೃದ್ದಿ ಹಾಗೂ ಭ್ರಷ್ಟಚಾರ ನಿರ್ಮೂಲನೆ ಸಾಧ್ಯ

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಮತ್ತು ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ವಿಚಕ್ಷಣ ಜಾಗೃತಿ ಸಪ್ತಾಹ- 2024 ಅಂಗವಾಗಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

ಸ್ಪರ್ಧೆ ಉದ್ಘಾಟಿಸಿದ ಜೆಎಸ್‌ಎಸ್‌ ಕಾನೂನು ಕಾಲೇಜಿನ ಪ್ರಾಂಶುಪಾಲೆ ವಿ. ವಾಣಿಶ್ರೀ ಮಾತನಾಡಿ, ಪ್ರಾಮಾಣಿಕ ಸಂಸ್ಕೃತಿಯಿಂದ ರಾಷ್ಟ್ರದ ಸಮೃದ್ದಿ ಹಾಗೂ ಭ್ರಷ್ಟಚಾರ ನಿರ್ಮೂಲನೆ ಸಾಧ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥ ಸುನಿಲ್ ವಿ. ಪಾಟೀಲ್ ಅವರು ಜಾಗೃತಿ ಮಹತ್ವದ ಬಗ್ಗೆ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ. ಇಳಂಗೋವನ್ ಮಾತನಾಡಿ, ಬಾಲ್ಯದಿಂದಲೇ ಭ್ರಷ್ಟಚಾರ ಮುಕ್ತ ವ್ಯವಸ್ಥೆ ಮಾಡಬೇಕಾಗಿರುತ್ತದೆ ಎಂದು ಹೇಳಿದರು.

ಸ್ಪರ್ಧೆಯಲ್ಲಿ ನಂಜನಗೂಡು ಜೆಎಸ್‌ಎಸ್ ಪಾಲಿಟೆಕ್ನಿಕ್, ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್, ಜೆಎಸ್‌ಎಸ್ ಪಾಲಿಟೆಕ್ನಿಕ್ ಮತ್ತು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸೇರಿದಂತೆ 100 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಪ್ರಥಮ ಮತ್ತು ದ್ವಿತೀಯ, ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ತೃತೀಯ, ಮೈಸೂರಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಮತ್ತು ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಸಮಾಧಾನಕರ ಬಹುಮಾನ ಪಡೆದರು.

ವಿಜೇತ ವಿದ್ಯಾರ್ಥಿಗಳಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಾಖಾ ವ್ಯವಸ್ಥಾಪಕಿ ಎನ್‌. ರತ್ನ, ಪ್ರಾಂಶುಪಾಲ ಬಿ. ಇಳಂಗೋವನ್‌ ಪ್ರಮಾಣ ಪತ್ರ, ಪಾರಿತೋಷಕ ಹಾಗೂ ನಗದು ಬಹುಮಾನ ನೀಡಿದರು.