ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಹಾಸನಾಂಬೆ ದರ್ಶನ ವಿದ್ಯುಕ್ತವಾಗಿ ಮುಕ್ತಾಯವಾಗಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು.ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿ 26.13 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಹುಂಡಿ ಎಣಿಕೆ ಕಾರ್ಯ ನಾಳೆ(ಅ.24) ನಡೆಯಲಿದೆ. ಕಳೆದ ವರ್ಷ 17.47 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದರು. ಟಿಕೆಟ್ ಮತ್ತು ಲಾಡು ಪ್ರಸಾದ ಮಾರಾಟದಿಂದ 9.68 ಕೋಟಿ ಆದಾಯ ಬಂದಿತ್ತು ಎಂದರು. ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ಯಶಸ್ವಿಯಾಗಿದ್ದು, ಇದಕ್ಕೆ ಸಹಕಾರ ನೀಡಿದ ಸಂಸದರು, ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು, ಎನ್ ಸಿಸಿ ಹಾಗೂ ಸ್ಕೌಟ್ ಮತ್ತುಗೈಡ್ಸ್ ವಿದ್ಯಾರ್ಥಿಗಳಿಗೂ ಸಹ ಧನ್ಯವಾದ ತಿಳಿಸಿದರು. ಸ್ಥಳೀಯರಿಗೂ ಸಹ ಈ ಬಾರಿ ನೆನ್ನೆ ಸಂಜೆದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ ಅತಿಥಿಗಣ್ಯರು ಸಹ ಈ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡುವ ಮೂಲಕ ಜಿಲ್ಲಾಡಳಿತ ನಿಗದಿಪಡಿಸಿದ ಸಮಯಕ್ಕೆ ಆಗಮಿಸಿ ದರ್ಶನ ಪಡೆದಿದ್ದಾರೆ. ಕೆಲವು ಮಂತ್ರಿಗಳು ಸರತಿ ಸಾಲಿನಲ್ಲಿ ಬಂದು ದರ್ಶನ ಪಡೆದಿದ್ದಾರೆ ಎಂದರು. ಕಂದಾಯ, ಪೊಲೀಸ್ ಸೇರಿ ಎಲ್ಲಾ ಇಲಾಖೆಯವರು ಶ್ರಮವಹಿಸಿ ಕೆಲಸ ಮಾಡಿದ್ದಾರೆ ಎಂದರಲ್ಲದೆ, ಈ ಸಲ ಜನಸಾಮಾನ್ಯರು ಸಂತೋಷದಿಂದ ದರ್ಶನ ಪಡೆದಿದ್ದಾರೆ. ನೂಕು ನುಗ್ಗಲು ಇಲ್ಲದೆ ಸರಳ, ಸುಲಲಿತವಾಗಿ ದರ್ಶನ ಆಗಿರುವುದು ಅತೀವ ಸಂತಸ ತಂದುಕೊಟ್ಟಿದೆ. ಇದರಿಂದ ಹಾಸನದ ಕೀರ್ತಿ ಪ್ರಜ್ವಲಿಸಿದೆ ಎಂದು ತಿಳಿಸಿದರು.
ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿತ್ತು. ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿ ದೇವಿಯದರ್ಶನ ಪಡೆದಿದ್ದಾರೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಹಗಲಿರುಳು ಶ್ರಮವಹಿಸಿ ಕರ್ತವ್ಯ ನಿರ್ವಹಿಸಿದ್ದಾರೆ. ಮಾಧ್ಯಮಗಳು ಕೂಡ ಹೆಚ್ಚಿನ ಸಹಕಾರ ನೀಡಿ ಸಹಕರಿಸಿದ್ದಾರೆ. ಅವರಿಗೂ ಕೂಡ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಮುಂದಿನ ವರ್ಷ ಅ.೨೯ರಂದು ಬಾಗಿಲು ತೆರೆದು ನ.೧೧ ರಂದು ಬಾಗಿಲು ಮುಚ್ಚಲಾಗುವುದು ಎಂದು ತಿಳಿಸಿದರು.ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದಕೆ.ಎಂ.ಶಿವಲಿಂಗೇಗೌಡ ಅವರು ಮಾತನಾಡಿ, ಮಾಧ್ಯಮಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಹೆಚ್ಚಿನ ಪ್ರಚಾರ ನೀಡಿ ಶ್ರೀ ಹಾಸನಾಂಬೆ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಜಾತ್ರಾ ಮಹೋತ್ಸವದ ಯಶಸ್ಸಿಗೆ ಸಹಕರಿಸಿದ್ದಾರೆ. ಅವರೆಲ್ಲರಿಗೂ ವಂದನೆ ಸಲ್ಲಿಸುವುದಾಗಿ ತಿಳಿಸಿದರಲ್ಲದೆ, ಜಿಲ್ಲಾಡಳಿತ ಹಾಗೂ ಜಿಲ್ಲೆಯಜನರ ಪರವಾಗಿ ಸಚಿವರಿಗೆ ಧನ್ಯವಾದ ಹೇಳಿದರು.
;Resize=(128,128))
;Resize=(128,128))
;Resize=(128,128))