ಸಾರಾಂಶ
ಪ್ರಸಕ್ತ ಶೈಕ್ಷಣಿಕ ಸಾಲಿನ 2023-2024ನೇ ವರ್ಷದಲ್ಲಿ ಜಿಎಂಐಟಿ ಕಾಲೇಜಿನ ಎಂಬಿಎ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ. ಸಂಜಯ ಪಾಂಡೆ ಹೇಳಿದ್ದು, ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ಕನ್ನಡಪ್ರಭ ವಾರ್ತೆ, ದಾವಣಗೆರೆ ಪ್ರಸಕ್ತ ಶೈಕ್ಷಣಿಕ ಸಾಲಿನ 2023-2024ನೇ ವರ್ಷದಲ್ಲಿ ಜಿಎಂಐಟಿ ಕಾಲೇಜಿನ ಎಂಬಿಎ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳು ದಾಖಲೆಯ ಫಲಿತಾಂಶ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಜಿಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಬಿ. ಸಂಜಯ ಪಾಂಡೆ ಹೇಳಿದ್ದು, ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.
ವಿಭಾಗದ ಮುಖ್ಯಸ್ಥ ಡಾ. ಎಸ್.ಬಸವರಾಜಪ್ಪ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆಗೆ ಹಾಜರಾದ 59 ವಿದ್ಯಾರ್ಥಿಗಳಲ್ಲಿ 58 ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಶೈಕ್ಷಣಿಕ ಸಾಮರ್ಥ್ಯ ಮತ್ತು ವ್ಯವಹಾರ ತತ್ವಗಳ ಪಾಂಡಿತ್ಯವನ್ನು ಪ್ರದರ್ಶಿಸಿದ್ದಾರೆ. ಆ ಮೂಲಕ ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ. ಹೆಚ್ಚುವರಿಯಾಗಿ, ಒಬ್ಬವಿದ್ಯಾರ್ಥಿಯು ಪ್ರಥಮ ದರ್ಜೆ ಗೌರವದೊಂದಿಗೆ ಉತ್ತಮ ಸಾಧನೆ ಮಾಡಿದ್ದಾನೆ ಎಂದು ಹೇಳಿದರು.ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ಡಾ.ಬಕ್ಕಪ್ಪ, ಈ ಸಾಧನೆಯು ಜಿಎಂಐಟಿ ಕಾಲೇಜಿನ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮಾತ್ರವಲ್ಲದೇ, ಜಿಎಂಐಟಿ ಕಾಲೇಜಿನ ಅಧ್ಯಾಪಕರು ಮತ್ತು ಸಿಬ್ಬಂದಿ ಒದಗಿಸಿದ ಅಚಲವಾದ ಬೆಂಬಲ ಮತ್ತು ಮಾರ್ಗದರ್ಶನವನ್ನು ಪ್ರತಿಬಿಂಬಿಸುತ್ತದೆ. ಈ ಮೈಲಿಗಲ್ಲು ಸಾಧಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಮತ್ತು ಅವರ ಮುಂದಿನ ಪ್ರಯತ್ನಗಳಲ್ಲಿ ಯಶಸ್ಸನ್ನು ಮುಂದುವರೆಸಬೇಕೆಂದು ಹಾರೈಸುತ್ತೇನೆ ಎಂದರು.
ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಜಿ.ಎಂ.ಲಿಂಗರಾಜು, ಆಡಳಿತಾಧಿಕಾರಿ ವೈ.ಯು. ಸುಭಾಷ್‌ಚಂದ್ರ, ಪ್ರಾಚಾರ್ಯ ಡಾ. ಎಂ.ಬಿ. ಸಂಜಯ್ ಪಾಂಡೆ ವಿಭಾಗದ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.- - - -20ಕೆಡಿವಿಜಿ34ಃ:
ದಾವಣಗೆರೆ ಜಿಎಂಐಟಿ ಕಾಲೇಜಿಗೆ ದಾಖಲೆಯ ಫಲಿತಾಂಶ ತಂದುಕೊಟ್ಟಿರುವ ಎಂಬಿಎ ವಿದ್ಯಾರ್ಥಿಗಳು.