ರಾಮನಗರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ 300 ಪಶು ವೈದ್ಯರು ಮತ್ತು 1 ಸಾವಿರ ಡಿ - ಗ್ರೂಪ್ ನೌಕರರನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು

ರಾಮನಗರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ 300 ಪಶು ವೈದ್ಯರು ಮತ್ತು 1 ಸಾವಿರ ಡಿ - ಗ್ರೂಪ್ ನೌಕರರನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು.

ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಯರೇಹಳ್ಳಿ ಗ್ರಾಮದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶು ವೈದ್ಯಕೀಯ ಇಲಾಖೆಯಲ್ಲಿ ಸಾಕಷ್ಟು ವೈದ್ಯರು ಮತ್ತು 3 ಸಾವಿರ ಡಿ ಗ್ರೂಪ್ ನೌಕರರ ಕೊರತೆ ಇದೆ. ಸರ್ಕಾರದ ಅನುಮತಿ ಪಡೆದುಕೊಂಡು ಸುಮಾರು 300 ಪಶು ವೈದ್ಯರು ಮತ್ತು 1 ಸಾವಿರ ಡಿ ಗ್ರೂಪ್ ನೌಕರರನ್ನು ಭರ್ತಿ ಮಾಡಲಾಗುವುದು ಎಂದರು.

ಕೋಳಿ ಸಾಕಾಣಿಕೆದಾರರು ಮತ್ತು ಮಾರಾಟಗಾರರ ನಡುವೆ ಸಾಕಾಣಿಕೆ ವೆಚ್ಚ ಹೆಚ್ಚಳ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೋಳಿ ಸಾಕಾಣಿಕೆದಾರರು ಪ್ರತಿ ಕೆಜಿಗೆ 10 ರು. ಸಾಕಾಣಿಕೆ ವೆಚ್ಚ ಕೇಳುತ್ತಿದ್ದು, ನಾವು ಮಾತುಕತೆ ನಡೆಸಿದರು ಫಲಕಾರಿಯಾಗಿಲ್ಲ. ಇಬ್ಬರಲ್ಲಿ ಹೊಂದಾಣಿಕೆಯಾದರೆ ಸಂತೋಷ. ಇಲ್ಲದಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ ಎಂದು ಪುಟ್ಟರಂಗಶೆಟ್ಟಿ ಹೇಳಿದರು.

23ಕೆಆರ್ ಎಂಎನ್ 3.ಜೆಪಿಜಿ

ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.