ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಜಂಟಿ ಉದ್ಘಾಟನಾ ಸಮಾರಂಭ
ಉಡುಪಿ: ವಿಪತ್ತಿನ ಸಮಯದಲ್ಲಿ ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್. ಸ್ವಯಂಸೇವಕರ ಪಾತ್ರ ಅನನ್ಯವಾದದ್ದು. ರಕ್ತದಾನ, ಪರಿಸರ ಸಂರಕ್ಷಣೆ ಮತ್ತು ಆರೋಗ್ಯ ಜಾಗೃತಿಯಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ನಾವು ಉತ್ತಮ ಸಮಾಜವನ್ನು ನಿರ್ಮಿಸಬಹುದಾಗಿದೆ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಆಡಳಿತಾಧಿಕಾರಿ ಡಾ. ಕೆ. ಶ್ರೀಧರ್ ಆರ್. ಪೈ ಹೇಳಿದರು.
ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್), ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಜಂಟಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯ್ಕ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರ್, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಭಾರತ್ ಸ್ಕೌಟ್ಸ್’ ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ, ಹಿರಿಯಡಕ ಕೆ.ಪಿ.ಎಸ್. ಪ್ರಾಂಶುಪಾಲ ಮಂಜುನಾಥ್ ಭಟ್, ಉಪಪ್ರಾಂಶುಪಾಲ ಪ್ರಕಾಶ್ ಪ್ರಭು, ಬೊಮ್ಮರಬೆಟ್ಟು ಗ್ರಾಪಂ ಅಭಿವೃದ್ಧಿ ಅಧಿಕಾರಿ ಸಂತೋಷ್ ಜೋಗಿ, ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣೆ ಸಮಿತಿಯ ಉಪಾಧ್ಯಕ್ಷ ಬಿ.ಎಲ್. ವಿಶ್ವಾಸ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್, ಮಹಾತ್ಮಾ ಗಾಂಧಿ ಸ್ಮಾರಕ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಪೈ, ಪಪೂ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಉಪಪ್ರಾಂಶುಪಾಲ ಡಾ. ಎಂ. ವಿಶ್ವನಾಥ್ ಪೈ, ಉಪನ್ಯಾಸಕಿ ಡಾ. ಮಲ್ಲಿಕಾ ಎ. ಶೆಟ್ಟಿ, ಎನ್‌ಎಸ್‌ಎಸ್ ಶಿಬಿರಾಧಿಕಾರಿ ಸುಚಿತ್ ಕೋಟ್ಯಾನ್, ರೆಡ್ ಕ್ರಾಸ್ ಶಿಬಿರಾಧಿಕಾರಿ ದೀಪಿಕಾ, ರೇಂಜರ್ಸ್ ರೋವರ್ಸ್ ಶಿಬಿರಾಧಿಕಾರಿಗಳಾದ ಅಕ್ಷತಾ, ಸ್ಟಾಲಿನ್ ಡಾನ್ಸನ್ ಡಿಸೋಜಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆದಿತ್ಯ ಶೆಟ್ಟಿ ನಿರೂಪಿಸಿ, ಲಾವಣ್ಯ ಸ್ವಾಗತಿಸಿ, ವೃಷಭ್ ಧನ್ಯವಾದ ಸಮರ್ಪಸಿದರು