ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಕಳೆದ ಒಂದೂವರೆ ಶತಮಾನಗಳಿಂದ ಜಗತ್ತಿನ ವಿವಿಧೆಡೆ ಮಾನವೀಯ ಸೇವೆ ಸಲ್ಲಿಸಿದೆ. ಪ್ರಕೃತಿ ವಿಕೋಪ ಮತ್ತು ಯುದ್ಧ ಸಂದರ್ಭದಲ್ಲಿ ಅದು ಸಲ್ಲಿಸಿದ ಸೇವೆ ಅನನ್ಯವಾದುದು ಎಂದು ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಹೇಳಿದರು.

ಉಡುಪಿ: ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಕಳೆದ ಒಂದೂವರೆ ಶತಮಾನಗಳಿಂದ ಜಗತ್ತಿನ ವಿವಿಧೆಡೆ ಮಾನವೀಯ ಸೇವೆ ಸಲ್ಲಿಸಿದೆ. ಪ್ರಕೃತಿ ವಿಕೋಪ ಮತ್ತು ಯುದ್ಧ ಸಂದರ್ಭದಲ್ಲಿ ಅದು ಸಲ್ಲಿಸಿದ ಸೇವೆ ಅನನ್ಯವಾದುದು. ಈ ದೃಷ್ಟಿಯಿಂದಲೇ ಅರ್ಹವಾಗಿಯೇ ನಾಲ್ಕು ಬಾರಿ ನೊಬೆಲ್ ಪ್ರಶಸ್ತಿ ಪಡೆದಿದೆ. ಉಡುಪಿ ಜಿಲ್ಲಾ ರೆಡ್‌ಕ್ರಾಸ್ ರಾಜ್ಯದಲ್ಲೆ ಪ್ರತಿಷ್ಠಿತವಾಗಿದೆ ಎಂದು ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಹೇಳಿದರು.ಶುಕ್ರವಾರ ಇಲ್ಲಿನ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ರೆಡ್‌ಕ್ರಾಸ್ ಘಟಕದಲ್ಲಿ ರೆಡ್‌ಕ್ರಾಸ್ ದಿನಾಚರಣೆ ಅಂಗವಾಗಿ ರೆಡ್‌ಕ್ರಾಸ್ ಸ್ಥಾಪಕ ಹೆನ್ರಿ ಡ್ಯುನಾಂಟ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ರೆಡ್ ಕ್ರಾಸ್ ಇತಿಹಾಸವನ್ನು ವಿವರಿಸಿದರು. ಇದೇ ಸಂದರ್ಭ ಫಲಾನುಭವಿಗಳಿಗೆ ಶ್ರವಣ ಸಾಧನ ಮತ್ತು ಗೃಹಪಯೋಗಿ ಸಾಮಗ್ರಿಗಳನ್ನು ವಿತರಿಸಲಾಯಿತು.

ಹೈಕೋರ್ಟ್ ವಕೀಲ ಶ್ರೀಕಾಂತ್ ಶಂಕರನಾರಾಯಣ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ, ರೆಡ್ ಕ್ರಾಸ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಮತ್ತು ವಾರ್ತಾ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಿಲ್ಲಾ ರೆಡ್ ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು.