ನವದೆಹಲಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚೂಂತಾರು ಅವರು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು.

ಉಡುಪಿ: ನವದೆಹಲಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚೂಂತಾರು ಅವರು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಅವರನ್ನು ಸ್ವಾಗತಿಸಿ, ಉಡುಪಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಡಾ. ಚೂಂತಾರು ಅವರು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಚಟುವಟಿಕೆ ಹಾಗೂ ರೆಡ್ ಕ್ರಾಸ್ ಪ್ರಾಯೋಜಿತ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯ ಚಟುವಟಿಕೆಗಳು ರಾಜ್ಯದಲ್ಲೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ, ಮನಶಾಸ್ತ್ರಜ್ಞ ವೈಶಾಖ್ ವಾರಂಬಳ್ಳಿ, ಆಡಿಯೋಲಜಿಸ್ಟ್ ನೆಲಿಶಾ ಹಾಗೂ ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.