ಕಾವೂರು ಪ್ರಥಮ ದರ್ಜೆ ಕಾಲೇಜಿನ ಯುವರೆಡ್ ಕ್ರಾಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ಮಂಗಳೂರು: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಮಾನವೀಯ ಮೌಲ್ಯಗಳು, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಯುವ ರೆಡ್‌ಕ್ರಾಸ್ ವಿಶೇಷ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಹರೀಶ್ ಮೋಟುಕಾನ ಹೇಳಿದರು.ಕಾವೂರು ಪ್ರಥಮ ದರ್ಜೆ ಕಾಲೇಜಿನ ಯುವರೆಡ್ ಕ್ರಾಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಪ್ರಾಂಶುಪಾಲೆ ಡಾ.ಗೀತಾ ಎಂ.ಎಲ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ರೆಡ್‌ಕ್ರಾಸ್‌ನ ಆಶಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಬೇಕು ಎಂದರು.

ಐಕ್ಯೂಎಸಿ ಸಂಯೋಜಕಿ ಡಾ.ತೆರೆಜ್ ಪಿರೇರಾ, ಯುವ ರೆಡ್‌ಕ್ರಾಸ್ ಘಟಕದ ಕಾರ್ಯದರ್ಶಿಗಳಾದ ರಾಕೇಶ್, ಪ್ರಣಮ್ಯ ಇದ್ದರು. ಶಿಬಿರದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು. ಶಿಬಿರಾರ್ಥಿಗಳಾದ ಪೂರ್ಣಿಮಾ, ರಮೀಝ್, ಕಾರ್ತಿಕ್ ಶಿಬಿರದ ಅನಿಸಿಕೆ ವ್ಯಕ್ತಪಡಿಸಿದರು.

ಯುವ ರೆಡ್‌ಕ್ರಾಸ್ ಯೋಜನಾಧಿಕಾರಿ ಡಾ.ಸಂತೋಷ್ ಪಿಂಟೋ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ರೀರಕ್ಷಾ ವಂದಿಸಿದರು. ಮನಿಶಾ ನಿರೂಪಿಸಿದರು.