ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ

| Published : Jun 29 2024, 12:30 AM IST

ಸಾರಾಂಶ

ಮಾಗಡಿ: ಸನಾತನ ಹಿಂದೂ ಧರ್ಮದಲ್ಲಿ ಪ್ರತಿ ಗ್ರಾಮದಲ್ಲೂ ದೇವಸ್ಥಾನ ಶಾಲೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಮಾಗಡಿ: ಸನಾತನ ಹಿಂದೂ ಧರ್ಮದಲ್ಲಿ ಪ್ರತಿ ಗ್ರಾಮದಲ್ಲೂ ದೇವಸ್ಥಾನ ಶಾಲೆ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ತಾಲೂಕಿನ ಮಾದಿಗೊಂಡನಹಳ್ಳಿಯ ಭಕ್ತ ಮುನೇಶ್ವರ ಮತ್ತು ನಂದೀಶ್ವರ ಸ್ವಾಮಿ ದೇವಸ್ಥಾನದ ಪುನರ್‌ ಪ್ರತಿಷ್ಠಾಪನೆ ಹಾಗೂ ಕುಂಭಾಭಿಷೇಕ ಮಹೋತ್ಸವದಲ್ಲಿ ಮಾತನಾಡಿದ ಅವರು, ಹಿಂದೆ ಹಿರಿಯರು ನ್ಯಾಯ, ಪಂಚಾಯತಿಗಳನ್ನು ದೇವಾಲಯ ಆವರಣಗಳಲ್ಲಿಯೇ ಮಾಡುತ್ತಿದ್ದರು. ಈಗ ತಪ್ಪು ಮಾಡಿದವರು ದೇವರಿಗೆ ತಪ್ಪು ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದರು.

ರಂಗನಾಥಾನಂದ ಸ್ವಾಮೀಜಿ ನೇತೃತ್ವದಲ್ಲಿ ದೇವಸ್ಥಾನ ಅಭಿವೃದ್ಧಿಯಾಗಿದ್ದು, ಶ್ರೀಗಳು ವೃದ್ಧಾಶ್ರಮವೊಂದನ್ನು ತೆರೆಯಲು ಸರ್ಕಾರದಿಂದ ಜಾಗ ಕೊಡಿಸುವಂತೆ ಕೇಳಿದ್ದು ಈ ಕೆಲಸವನ್ನು ಶೀಘ್ರದಲ್ಲೇ ಮಾಡುತ್ತೇನೆ. ತಂದೆ ತಾಯಿಗಳನ್ನು ನೋಡಿಕೊಳ್ಳುವ ಕರ್ತವ್ಯ ಮಕ್ಕಳ ಮೇಲಿರುತ್ತದೆ. ವೃದ್ಧಾಶ್ರಮಗಳು ಹೆಚ್ಚು ತೆರೆಯುವುದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ತಿಳಿಸಿದರು.

ಸ್ಪಟಿಕಪುರಿ ಪೀಠಾಧ್ಯಕ್ಷ ನಂಜಾವಧೂತ ಶ್ರೀಗಳು, ಭಕ್ತ ಮುನೇಶ್ವರಸ್ವಾಮಿ ಕ್ಷೇತ್ರದ ಧರ್ಮಾಧಿಕಾರಿ ರಂಗನಾಥನಂದ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರ ಸ್ವಾಮೀಜಿ, ರಾಮನಗರದ ಅನ್ನದಾನೇಶ್ವರನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠಾಧ್ಯಕ್ಷರಾದ ಡಾ. ನಿರ್ಮಲಾನಂದ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠ ಅಧ್ಯಕ್ಷರಾದ ಸಿದ್ದಲಿಂಗ ಮಹ ಸ್ವಾಮೀಜಿ, ನೆಲಮಂಗಲ ಶಾಸಕ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ಪುಟ್ಟಣ್ಣ, ಚಲನಚಿತ್ರ ನಟ ದೇವರಾಜ್, ವಿಧಾನ ಪರಿಷತ್ ಮಾಜಿ ಸದಸ್ಯ ಅ.ದೇವೇಗೌಡ, ಮಾಜಿ ಶಾಸಕ ಎ.ಮಂಜುನಾಥ್, ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಾ. ಎಚ್.ಎಂ.ಕೃಷ್ಣಮೂರ್ತಿ ಇತರರಿದ್ದರು.

ಇದೇ ವೇಳೆ ಅತಿ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿನಿಯರಿಗೆ ದೇವಸ್ಥಾನದ ವತಿಯಿಂದ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.ಹೆಲಿಕ್ಯಾಪ್ಟರ್ ಮೂಲಕ ಹೂ ಮಳೆ:

ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕುಂಭಾಭಿಷೇಕ ನೆರವೇರಿಸುವ ವೇಳೆ ಹೆಲಿಕ್ಯಾಪ್ಟರ್ ಮೂಲಕ ಗೋಪುರದ ಕಳಶಕ್ಕೆ ಹೂಮಳೆ ಸುರಿಸಿದ್ದು ವಿಶೇಷವಾಗಿತ್ತು. ಐದು ಸುತ್ತು ಹೆಲಿಕ್ಯಾಪ್ಟರ್ ದೇವಸ್ಥಾನವನ್ನು ಸುತ್ತಾಡಿ ಹೂ ಮಳೆ ಸುರಿಸಿತು.