ಸಾರಾಂಶ
ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಸುರಕ್ಷತೆ ಮತ್ತು ಉಳಿತಾಯ, ಜನರ ಆರ್ಥಿಕ, ಸಾಮಾಜಿಕ ಭದ್ರತೆಗಾಗಿ ಮತ್ತು ಮುಂದಿನ ಭವಿಷ್ಯಕ್ಕಾಗಿ ಸೇವೆ ನೀಡುವುದು ಅಗತ್ಯವಾಗಿದೆ
ಕನ್ನಡಪ್ರಭ ವಾರ್ತೆ ಮೈಸೂರು
ಸಾಮಾನ್ಯರಿಗೆ ಪ್ರಾಮಾಣಿಕ ಮತ್ತು ಪಾರದರ್ಶಕ ಸೇವೆ ನೀಡುವುದು ಇಂದಿನ ಅಗತ್ಯ ಅಂಶವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಪ್ರಾದೇಶಿಕ ವಿಭಾಗದ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನಿಂದ ಕಳಸ್ತವಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಕಲ್ಪ ಸೌಧ ಸಭಾಂಗಣದಲ್ಲಿ ನಡೆದ ಗ್ರಾಮಾಭಿವೃದ್ಧಿ ಯೋನಜೆಯ ಸೇವಾ ಪ್ರತಿನಿಧಿಗಳಿಗೆ ಸರ್ವ ಸದಸ್ಯರ ಪ್ರಬುದ್ದತೆಯೇ ನಮ್ಮ ಬದ್ಧತೆ ಘೋಷ ವಾಕ್ಯದ ಬಗ್ಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಸುರಕ್ಷತೆ ಮತ್ತು ಉಳಿತಾಯ, ಜನರ ಆರ್ಥಿಕ, ಸಾಮಾಜಿಕ ಭದ್ರತೆಗಾಗಿ ಮತ್ತು ಮುಂದಿನ ಭವಿಷ್ಯಕ್ಕಾಗಿ ಸೇವೆ ನೀಡುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.ಜಿಲ್ಲಾ ನಿರ್ದೇಶಕ ವಿ. ವಿಜಯ್ ಕುಮಾರ್ ನಾಗನಾಳ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ರೂವಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಅತ್ಯಂತ ಆಸಕ್ತಿಯಿಂದ ಹುಟ್ಟು ಹಾಕಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಂದು ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ಕುಟುಂಬಗಳು ಪಾಲುದಾರ ಬಂಧುಗಳಾಗಿದ್ದು, ವಿಭಿನ್ನ ಚಟುವಟಿಕೆಗಳನ್ನು ಹಮ್ಮಿಕೊಂಡು ಮಹಿಳೆಯರನ್ನು ಜಾಗೃತಿಗೊಳಿಸಿ ಆರ್ಥಿಕ ಪ್ರಜ್ಞಾವಂತಿಕೆ ಬೆಳಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ತಾಲೂಕಿನ ಯೋಜನಾಧಿಕಾರಿ ಪಿ. ಶಶಿರೇಖಾ, ಯೋಜನಾಧಿಕಾರಿಗಳಾದ ಲೋಕೇಶ್, ಗಾಯತ್ರಿ, ಸಾವಿತ್ರಿ, ದಿನೇಶ್ ಮತ್ತು ಸಂತೋಷ ಹಾಗೂ ಮೇಲ್ವಿಚಾರಕ ಶ್ರೇಣಿಯ ಎಲ್ಲ ಸಿಬ್ಬಂದಿ ಮತ್ತು ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.