ಕನಿಷ್ಠ ವಿಮಾ ಮೊತ್ತಕ್ಕೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ನೋಂದಣಿ: ಸುಧಾಕರ ಮಲ್ಯ

| Published : Aug 30 2025, 01:01 AM IST

ಕನಿಷ್ಠ ವಿಮಾ ಮೊತ್ತಕ್ಕೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ನೋಂದಣಿ: ಸುಧಾಕರ ಮಲ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಅಪಘಾತ ವಿಮಾ ಯೋಜನೆ ನೋಂದಣಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಕನಿಷ್ಠ ವಿಮಾ ಪಾಲಿಸಿ ಕಂತಿನ ಪಾವತಿಯೊಂದಿಗೆ ಐಪಿಪಿಬಿ ಅಪಘಾತ ವಿಮಾ ಯೋಜನೆಗೆ ಜಾರಿಯಲ್ಲಿದೆ ಎಂದು ಮಂಗಳೂರು ವಿಭಾಗದ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರು. ವರೆಗಿನ ಅಪಘಾತ ವಿಮಾ ಯೋಜನೆ ನೋಂದಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕರ್ನಾಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತಕರು ಅಂಚೆ ಇಲಾಖೆಯ ಅಪಘಾತ ವಿಮಾ ಯೋಜನೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ದ.ಕ.ಜಿಲ್ಲೆಯಲ್ಲಿ 310 ಮಂದಿ ಪತ್ರಕರ್ತರು ನೋಂದಾಯಿಸಿಕೊಂಡಿದ್ದಾರೆ ಎಂದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, 10 ಲಕ್ಷ ರು. ಅಪಘಾತ ವಿಮಾ ಯೋಜನೆಗೆ ಪ್ರತಿಯೊಬ್ಬರಿಗೆ 550 ರು. ವೆಚ್ಚ ತಗಲುತ್ತಿದೆ. ಈ ಮೊತ್ತವನ್ನು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯಿಂದ ಪಾವತಿಸಲಾಗುವುದು. ಸಂಘದ ಸದಸ್ಯರಿಗೆ ಯಾವುದೇ ಶುಲ್ಕ ವಿರುವುದಿಲ್ಲ. ನೋಂದಾವಣೆ ಸಂಪೂರ್ಣ ಉಚಿತವಾಗಿರುತ್ತದೆ ಎಂದರು.

ಉಪ ಅಂಚೆ ಅಧೀಕ್ಷಕ ದಿನೇಶ್, ಐಪಿಪಿಬಿ ಮೆನೇಜರ್ ಸುಬ್ರಹ್ಮಣ್ಯ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.