ಬಿಜೆಪಿಗೆ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ

| Published : Sep 03 2024, 01:36 AM IST

ಬಿಜೆಪಿಗೆ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರು ಹೆಚ್ಚು ಹೆಚ್ಚು ಸದಸ್ಯರನ್ನು ಬಿಜೆಪಿ ಪಕ್ಷಕ್ಕೆ ನೋಂದಣಿ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಹೇಳಿದರು. ರಾಮನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ರಾಮನಗರ

ಬೂತ್ ಮಟ್ಟದ ಪಕ್ಷದ ಕಾರ್ಯಕರ್ತರು ಹೆಚ್ಚು ಹೆಚ್ಚು ಸದಸ್ಯರನ್ನು ಬಿಜೆಪಿ ಪಕ್ಷಕ್ಕೆ ನೋಂದಣಿ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ ಹೇಳಿದರು.ನಗರದ ಬಿಜೆಪಿ ಕಚೇರಿಯಲ್ಲಿ ರಾಮನಗರ ತಾಲೂಕು ಘಟಕದ ಪದಾಧಿಕಾರಿಗಳ ಬಿಜೆಪಿ ಸದಸ್ಯತ್ವ ಅಭಿಯಾನ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಪ್ರತಿ ಬೂತ್ ನಲ್ಲಿ ಕಾರ್ಯಕರ್ತರು ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಸೆ. 2ರಂದು ಸದಸ್ಯತ್ವ ಅಭಿಯಾನಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ವಿಶ್ವದಲ್ಲಿ ಅತೀ ಹೆಚ್ಚು ಸದಸ್ಯತ್ವ ಹೊಂದಿರುವ ಪಕ್ಷ ರಾಜಕೀಯ ಪಕ್ಷ ಬಿಜೆಪಿಯಾಗಿದೆ. ಹಿಂದೆ ನಡೆದ ಸದಸ್ಯತ್ವ ಅಭಿಯಾನಕ್ಕಿಂತಲೂ ಈ ಭಾರಿ ಹೆಚ್ಚಿನ ಸದಸ್ಯರನ್ನು ನೊಂದಣಿ ಮಾಡಬೇಕಿದೆ ಎಂದರು. ಪ್ರತಿ ಬೂತ್ ನಲ್ಲಿ 300ಕ್ಕೂ ಹೆಚ್ಚಿನ ಸದಸ್ಯರನ್ನು ನೊಂದಣಿ ಮಾಡುವ ಮೂಲಕ ಕಾರ್ಯಕರ್ತರು ಸದಸ್ಯತ್ವ ಅಭಿಯಾನಕ್ಕೆ ಹೆಚ್ಚು ಬಲ ತುಂಬಬೇಕು ಎಂದು ಕರೆ ನೀಡಿದರು. ರಾಮನಗರ ತಾಲೂಕು ಘಟಕದ ಅಧ್ಯಕ್ಷ ಪಿ.ಎಸ್. ಜಗದೀಶ್ ನೇತೃತ್ವದಲ್ಲಿ ಬೂತ್ ಮಟ್ಟದ ಮುಖಂಡರು, ಪ್ರಮುಖರು ಸೇರಿ 300 ಜನ ಸದಸ್ಯತ್ವ ನೊಂದಣಿ ಮಾಡುವ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮುರಳೀಧರ್, ತಾಲೂಕು ಘಟಕ ಅಧ್ಯಕ್ಷ ಪಿ.ಎಸ್. ಜಗದೀಶ್, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್, ಸುಗ್ಗನಹಳ್ಳಿ ಮಹದೇವಯ್ಯ, ಕಿಶನ್, ರೈತಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಕುಮಾರ್, ಶಿವರಾಜು, ಉಮೇಶ್, ಮುಖಂಡರಾದ ಬನ್ನಿಕುಪ್ಪೆ ಭರತ್ ರಾಜ್ , ರಾಘವೇಂದ್ರ, ಕೃಷ್ಣ ಉಪಸ್ಥಿತರಿದ್ದರು.