ಸಾರಾಂಶ
ಯಾವುದೇ ಚುನಾವಣೆಯಲ್ಲಿ ಯಾವುದೇ ಪ್ರಜೆಗಳು ಮತದಾನದಿಂದ ದೂರ ಉಳಿಯಬಾರದು ಎಂದು ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕುರ್ತಕೋಟಿ ಹೇಳಿದರು.
- ಮತದಾರರ ನೋಂದಣಿ ಜಾಗೃತಿ ಕಾರ್ಯಕ್ರಮದಲ್ಲಿ ಕುರ್ತಕೋಟಿಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಸಾರ್ವಜನಿಕರು ಸೇರಿದಂತೆ ವಿಶೇಷಚೇತನರು ಮತದಾನದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪ್ರತಿ ಗ್ರಾಮ ಮಟ್ಟದಲ್ಲಿವೂ ತಪ್ಪದೇ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ್ ಕುರ್ತಕೋಟಿ ಹೇಳಿದರು.ಮಂಗಳವಾರ ಇಲ್ಲಿನ ತಾಪಂ ಸಭಾ ಭವನದಲ್ಲಿ ನಡೆದ ಹುಬ್ಬಳ್ಳಿ ತಾಲೂಕು ಆಡಳಿತ, ತಾಪಂ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಧಾರವಾಡ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ನೋಂದಾಣಿಯ ಜಾಗೃತಿ ಕಾರ್ಯಕ್ರಮ ಮತ್ತು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಯಾವುದೇ ಚುನಾವಣೆಯಲ್ಲಿ ಯಾವುದೇ ಪ್ರಜೆಗಳು ಮತದಾನದಿಂದ ದೂರ ಉಳಿಯಬಾರದು. ತಮ್ಮ ಹಕ್ಕನ್ನು ಮತದಾನ ಮಾಡುವ ಮೂಲಕ ಚಲಾಯಿಸಬೇಕು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯವನ್ನು ಎತ್ತಿಹಿಡಿಯಲು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಜಾಗೃತಿ ಮೂಡಿಸಿ, ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರೇರಿಪಿಸಬೇಕು ಎಂದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಎಸ್.ವಿ. ಬಂಗಾರಿಮಠ ಮಾತನಾಡಿ, ಯಾವುದೇ ಚುನಾವಣೆಯಲ್ಲಿ ಗರಿಷ್ಠ ಮತದಾನವಾಗಬೇಕು ಮತ್ತು ಒಂದೇ ಒಂದು ಮತವೂ ನಿರ್ಣಾಯಕವಾಗಿರುವುದರಿಂದ 18 ವರ್ಷ ಮೇಲ್ಪಟ್ಟ ವಿಶೇಷಚೇತನ ಯುವಕ-ಯುವತಿಯರಿಗೆ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಹುಬ್ಬಳ್ಳಿ ತಾಪಂ ವತಿಯಿಂದ ಆರಂಭಿಸಿದೆ. ಹೊಸ ಮತದಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ವೇಳೆ ತಾಪಂ ವ್ಯವಸ್ಥಾಪಕ ಶಿವಾನಂದ ನಸಬಿ, ತಾಪಂ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತ ಮಹಾಂತೇಶ ಕುರ್ತಕೋಟಿ, ಎಲ್ಲ ಗ್ರಾಪಂ ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರು ಇದ್ದರು.