ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಯಿತ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2026-27ನೇ ಸಲಿನ ಸಮನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 04-09-2026 ರವರೆಗೆ ವಿಸ್ತರಿಸಲಾಗಿದೆ.
ಕನ್ನಡಪ್ರಭ ಆರ್ತೆ ಯಾದಗಿರಿ
ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಯಿತ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2026-27ನೇ ಸಲಿನ ಸಮನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 04-09-2026 ರವರೆಗೆ ವಿಸ್ತರಿಸಲಾಗಿದೆ.ಈ ಮೊದಲು ದಿನಾಂಕ: 20-08-2026 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದೀಗ ಅರ್ಹ ಅಭ್ಯರ್ಥಿಗಳು ಮತ್ತು ಸಂಸ್ಥೆಗಳ ಅನುಕೂಲಕ್ಕಾಗಿ ದಿನಾಂಕ: 21-08-2026 ರಿಂದ 04-09-2026 ರವರೆಗೆ (ಮತ್ತೆ 15 ದಿನಗಳು) ಕಾಲಾವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ಅರ್ಹರು ಸೇವಾಸಿಂಧು ಪೋರ್ಟಲ್ Sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು.
ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೆಯೇ ಇಲಾಖೆಯ ಕಚೇರಿಯಲ್ಲಿ ನೇರವಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಮಗೆ ಯಾವುದೇ ಮಾಹಿತಿ, ಅರ್ಜಿ ವಿವರಗಳು ಅಥವಾ ಇಲಾಖೆಯ ಮಾರ್ಗದರ್ಶಿಸೂಚಿಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದಗಿರಿ ಜಿಲ್ಲೆ ಇವರ ದೂರವಾಣಿ ಸಂಖ್ಯೆ: 08473 253721 ನ್ನು ಸಂಪರ್ಕಿಸಬಹುದಾಗಿದೆ ಎಂದು ಯಾದಗಿರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.