ಸಾರಾಂಶ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಗೆ ನೋಂದಣಿ ಅಭಿಯಾನವನ್ನು ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಜಂಟಿಯಾಗಿ ಆಯೋಜಿಸಲಾಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಗೆ ನೋಂದಣಿ ಅಭಿಯಾನವನ್ನು ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಜಂಟಿಯಾಗಿ ಆಯೋಜಿಸಲಾಯಿತು.ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಕಚೇರಿಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಹಾಗೂ ವಾಹನ ಚಾಲಕರ ಸಂಘದವರು ಜಂಟಿಯಾಗಿ ಆಯೋಜಿಸಿದ್ದು ನಿಗದಿತ ದಾಖಲಾತಿಗಳನ್ನು ಪರಿಶೀಲಿಸುವ ಮೂಲಕ ಚಾಲಕರಿಗೆ, ವರ್ಕ್ಶಾಪ್ ಸಿಬ್ಬಂದಿಗಳಿಗೆ ಸೇರಿದಂತೆ ಇತರೆ ಕಾರ್ಮಿಕರಿಗೆ ಇಲಾಖೆಯ ವತಿಯಿಂದ ಕರ್ನಾಟಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಫಲಾನುಭವಿಗಳಿಗೆ ನೀಡಲಾಗುವ ಸೌಲಭ್ಯಗಳ ಮಾಹಿತಿ ನೀಡಲಾಯಿತು. ಸ್ಥಳದಲ್ಲೇ ನೊಂದಾಣಿ ಪ್ರಕ್ರಿಯೆಯನ್ನು ನಡೆಸಿದರು. ಈ ಸಂದರ್ಭ 50 ಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡರು.
ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುವ ಕಾರ್ಮಿಕರ ಕಲ್ಯಾಣ ಮಂಡಳಿಯ ವಿವರಗಳನ್ನು ತಿಳಿಸಿದ್ದು ಮಾತ್ರವಲ್ಲದೆ ನೋಂದಾಣಿ ಪ್ರಕ್ರಿಯೆಯನ್ನು ಸ್ಥಳದಲ್ಲೇ ನಡೆಸಿಕೊಟ್ಟಿದ್ದು ಕಾರ್ಮಿಕರು ಸಾರ್ವಜನಿಕರ ಗಮನಸೆಳೆಯಿತು.ಇದೇ ಸಂದರ್ಭ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಪದಾಧಿಕಾರಿಗಳು ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯ ಅಧಿಕಾರಿಗಳು ಇದ್ದರು.