ಬಾಗಲಕೋಟೆ: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಈ ಸಂಸ್ಥೆಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡುವ ಮೂಲಕ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪಾನೆಲ್ ಮಾಡುವುದರೊಂದಿಗೆ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರಪಡಿಸಲು ಅವಕಾಗುತ್ತದೆ. ಆದ್ದರಿಂದ ಬಾಗಲಕೋಟೆ ಜಿಲ್ಲೆಯ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜೂನ್ 12 ರೊಳಗೆ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಾಗಲಕೋಟೆ ಕಲಾಭವನ ಸಾಂಸ್ಕೃತಿಕ ಸಮುಚ್ಚಯ, ಸೆಕ್ಟರ್ ನಂ.19, 6ನೇ ರಸ್ತೆ, ನವನಗರ, ಬಾಗಲಕೋಟೆ ಇವರಿಗೆ ಸ್ವ-ವಿವರದ ಮಾಹಿತಿಯೊಂದಿಗೆ ಸಲ್ಲಿಸುವಂತೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಂತಾರಾಷ್ಟ್ರ ಮಟ್ಟದಲ್ಲಿ ಕಲಾತಂಡಗಳು ಭಾಗವಹಿಸುವಿಕೆಗೆ ನೋಂದಣಿ
ಬಾಗಲಕೋಟೆ: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
