ಸಾರಾಂಶ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂ.ಗೆ ₹2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂ.ಗೆ ₹2320 ರಂತೆ ಹಾಗೂ ಪ್ರತಿ ಕ್ವಿಂ. ರಾಗಿಗೆ ₹4290 ರಂತೆ ಖರೀದಿಸಲು ತಾಲೂಕು ಕೇಂದ್ರಗಳಲ್ಲಿ ನೋಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂ.ಗೆ ₹2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂ.ಗೆ ₹2320 ರಂತೆ ಹಾಗೂ ಪ್ರತಿ ಕ್ವಿಂ. ರಾಗಿಗೆ ₹4290 ರಂತೆ ಖರೀದಿಸಲು ತಾಲೂಕು ಕೇಂದ್ರಗಳಲ್ಲಿ ನೋಂದಣಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಅಧ್ಯಕ್ಷ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆ, ಹೊನ್ನಾಳಿ, ಜಗಳೂರು, ಹರಿಹರ, ಚನ್ನಗಿರಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣಗಳಲ್ಲಿ ನೋಂದಣಿ ಕೇಂದ್ರಗಳ ತೆರೆಯಲಾಗಿದೆ. ಕೃಷಿ ಇಲಾಖೆ ಸಿದ್ಧಪಡಿಸಿದ ಫ್ರೂಟ್ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆ ಆಧಾರದ ಮೇಲೆ ರೈತರ ಹೆಸರನ್ನು ನೋಂದಾಯಿಸಬಹುದು. ಫ್ರೂಟ್ ತಂತ್ರಾಂಶದಲ್ಲಿ ತೊಂದರೆ ಇದ್ದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು, ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ. 2025ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಬೆಳೆ ಖರೀದಿಸಲಾಗುವುದು ಎಂದಿದ್ದಾರೆ.ಖರೀದಿಗೆ ಸಂಬಂಧಿಸಿದ ಯಾವುದೇ ರೀತಿಯ ದೂರುಗಳಿದ್ದಲ್ಲಿ ತಹಸೀಲ್ದಾರರು, ಉಪವಿಭಾಗಾಧಿಕಾರಿ, ಜಂಟಿ ನಿರ್ದೇಶಕರು (ಆಹಾರ) ಹಾಗೂ ಕೃಷಿ ಮಾರುಕಟ್ಟೆ ಅಧಿಕಾರಿಗಳ ಗಮನಕ್ಕೆ ತರಬಹುದು. ಅಥವಾ ದೂ: 08192-296770 ಇಲ್ಲಿಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.
- - - -13ಕೆಡಿವಿಜಿ42: