ಸಾರಾಂಶ
ಖಾಸಗಿ, ಅನುದಾನಿತ, ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 3 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದವರು ನೈಋತ್ಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ನೈಋತ್ಯ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿಗೆ ಈಗಾಗಲೇ 18 ಸಾವಿರ ಶಿಕ್ಷಕರು ನೋಂದಣಿ ಮಾಡಿಕೊಂಡಿದ್ದು, ಅದು 20 ಸಾವಿರಕ್ಕೆ ಏರಿಯಾಗುವ ಸಂಭವವಿದೆ. ಈ ಬಾರಿ ಚುನಾವಣಾ ಆಯೋಗದ ನಿರ್ದೆಶನದಂತೆ ಜಿಲ್ಲಾಡಳಿತವೇ ಮತದಾರರನ್ನು ನೋಂದಾಯಿಸಿಕೊಳ್ಳುತ್ತಿದೆ ಎಂದು ನೈಋತ್ಯ ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಹೇಳಿದ್ದಾರೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ, ಅನುದಾನಿತ, ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 3 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದವರು ಮತದಾರರಾಗಲು ಆರ್ಹರಾಗಿದ್ದಾರೆ. ಉಡುಪಿ, ದ.ಕ., ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚೆನ್ನಗಿರಿ ಸೇರಿ 30 ವಿಧಾನಸಭಾ ಕ್ಷೇತ್ರಗಳು ನೈಋತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಗೆ ಒಳಪಡುತ್ತವೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಪ್ರಖ್ಯಾತ ಶೆಟ್ಟಿ, ಮುಖಂಡರಾದ ಕುಶಲ ಶೆಟ್ಟಿ, ಭಾಸ್ಕರ ರಾವ್ ಕಿದಿಯೂರು, ಬಿಪಿನ್ ಚಂದ್ರಪಾಲ್ ಮತ್ತಿತರರಿದ್ದರು.