ಪೆಟ್ ಶಾಪ್‍ಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ

| Published : Jun 27 2025, 12:48 AM IST

ಪೆಟ್ ಶಾಪ್‍ಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಕು ಪ್ರಾಣಿಗಳ ಮಾರಾಟ ಮಳಿಗೆಗಳು ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ ಮಂಗಳವಾರ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಕು ಪ್ರಾಣಿಗಳ ಮಾರಾಟ ಮಳಿಗೆಗಳು ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಎಸ್.ಪಿ.ಸಿ.ಎ ನೋಂದಣಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಪೆಟ್ ಶಾಪ್‍ಗಳ ಮಾಲೀಕರಿಗೆ ಕಾಲಮಿತಿ ನಿಗದಿಪಡಿಸಿ, ಆದರೂ ನೋಂದಣಿ ಪಡೆಯದ ಮಾಲೀಕರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಾಣಿಗಳ ರಕ್ಷಣೆ ಒಂದು ಮಹತ್ವದ ಕಾರ್ಯವಾಗಿದ್ದು, ಜಿಲ್ಲೆಯಲ್ಲಿ ಪ್ರಾಣಿಗಳ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಿ ಅವುಗಳನ್ನು ರಕ್ಷಿಸಬೇಕು. ಪ್ರಾಣಿಗಳ ಮೇಲೆ ಕ್ರೌರ್ಯ ನಡೆಸುವುದು ಕಂಡು ಬಂದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಿರಾಶ್ರಿತ ಪ್ರಾಣಿಗಳಿಗೆ ಅಗತ್ಯ ಶುಶ್ರೂಷೆ ನೀಡುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಬೊಂಡಂತಿಲ ಗ್ರಾಮದಲ್ಲಿ ಪ್ರಾಣಿ ಮಿತ್ರ ಆಸ್ಪತ್ರೆ ತೆರೆಯುವ ಯೋಜನೆ ಅನುಷ್ಠಾನದ ಕುರಿತು ಹಾಗೂ ರಸ್ತೆ ಅಪಘಾತ ಅಥವಾ ಇತರ ಕಾರಣಗಳಿಂದ ಸತ್ತ ಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ಸ್ಮಶಾನ ಸೌಲಭ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಎಸಿಪಿ ಗೀತಾ ಕುಲಕರ್ಣಿ, ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸಮಿತಿಯ ಸದಸ್ಯೆ ಸುಮ ಆರ್. ನಾಯಕ್ ಮತ್ತಿತರರು ಇದ್ದರು.